Ticker

6/recent/ticker-posts

Ad Code

Responsive Advertisement

ಬೆಂಗಳೂರು ರಸ್ತೆ-ಗುಂಡಿಗಳನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು : ಇತ್ತೀಚೆಗೆ ಮುಖ್ಯ  ಮಂತ್ರಿಗಳು ನೀಡಿದ ಹೇಳಿಕೆಯನುಸಾರ ಬೆಂಗಳೂರು ನಗರದ ರಸ್ತೆಗಳ ನಿರ್ವಹಣೆಗಾಗಿ ಕಳೆದ ಐದು ವರ್ಷಗಳಲ್ಲಿ 20 ಸಾವಿರ ಕೋಟಿ ಖರ್ಚು ಮಾಡಲಾಗಿದೆ ಎಂಬುದನ್ನು ಪ್ರಶ್ನಿಸಿ, ಸರ್ಕಾರ ಶ್ವೇತ ಪತ್ರವನ್ನು  ಹೊರಡಿಸಬೇಕು ಎಂದು ಆಗಹಿಸಿ, ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಆಗುತ್ತಿರುವ ಸಾವು ನೋವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ 10 ದಿವಸಗಳ ಬೃಹತ್ ಜನಜಾಗೃತಿ ಹಾಗೂ ಸಹಿ ಸಂಗ್ರಹಣಾ ಅಭಿಯಾನವನ್ನು ಇಂದು ನಗರ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಆಮ್ ಆದ್ಮಿ ಪಕ್ಷದ  ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿರವರ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.




ಅಭಿಯಾನದಲ್ಲಿ  ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ  ಜಗದೀಶ್ ವಿ ಸದಂ, ಮೋಹನ್   ದಾಸರಿ,  ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ರಾಜಶೇಖರ್ ದೊಡ್ಡಣ್ಣ, ಗೋಪಿನಾಥ್, ಉಷಾ ಮೋಹನ್ ಮುಂತಾದವರು ಭಾಗವಹಿಸಿದ್ದರು.

Post a Comment

0 Comments

Ad Code

Responsive Advertisement