ದೊಡ್ಡಬಳ್ಳಾಪುರ, ಡಿ 18: ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದ ಆರ್ ಎಲ್ ಜಾಲಪ್ಪ ಅವರ ಅಂತ್ಯಕ್ರಿಯೆ ದೊಡ್ಡಬಳ್ಳಾಪುರದ ಹೊರವಲಯದಲ್ಲಿ ಇಂದು ಶನಿವಾರ ನೆರವೇರಿತು. ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸುಧಾಕರ್, ಡಿಕೆ ಶಿವಕುಮಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಹಲವು ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿ ನಿನ್ನೆ ಕೊನೆಯುಸಿರೆಳೆದಿದ್ದ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಅವರು ಇಂದು ಪಂಚಭೂತಗಳಲ್ಲಿ ಲೀನರಾದರು. ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಾಲಪ್ಪ ಕ್ಯಾಂಪಸ್ನಲ್ಲಿ ಇಂದು ಸಂಜೆ ಅವರ ಅಂತಿಮ ವಿಧಿ ವಿಧಾನ ಮುಕ್ತಾಯಗೊಂಡಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಈಡಿಗ ಸಂಪ್ರದಾಯದ0ತೆ ಅವರ ಅಂತ್ಯಕ್ರಿಯೆ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಸಮರ್ಪಿಸಲಾಯಿತು.
ದೇವರಾಜು ಅರಸು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆದ ಅಂತ್ಯಸ0ಸ್ಕಾರದ ವೇಳೆ ಸಚಿವ ಡಾ. ಕೆ ಸುಧಾಕರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ವೀರಪ್ಪ ಮೊಯಿಲಿ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಹಾಗು ಕೆಲವು ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್ ಎಲ್ ಜಾಲಪ್ಪನವರ ಮಹದ್ಕಾರ್ಯಗಳನ್ನ ನೆನಪಿಸಿಕೊಂಡರು.
Vartajala Daily, Bengaluru
0 Comments