Ticker

6/recent/ticker-posts

Ad Code

Responsive Advertisement

ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬಳ್ಳಾರಿ, ಡಿ 12: ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ, ಕೊಟ್ಟೂರು ಪಟ್ಟಣದ ತೇರು ಬಯಲು ಬಸವೇಶ್ವರ ದೇವಸ್ಥಾನದ ಬಳಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಅಭಿಯಾನವನ್ನು ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ ಅವರು ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಅತಿಹೆಚ್ಚಾಗಿ ಯುವಕರು ಪಡೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿ ಎಂದು ಸೂಚನೆ ನೀಡಿದರು. ಕೊಟ್ಟೂರು ಬ್ಲಾಕ್ ನಲ್ಲಿ ಒಟ್ಟು ಐದು ಕಡೆಗಳಲ್ಲಿ ಇಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ A.M.J. ಮಲ್ಲಿಕಾರ್ಜುನ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಪಿಎಚ್ ದೊಡ್ಡರಾಮಣ್ಣ, ಸುಧಾಕರ ಪಾಟೀಲ್, ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಯುವ ಕಾಂಗ್ರೆಸ್ ಅಧ್ಯಕ್ಷ ಆಕರ್ಷ  ಹಳೆಮನೆ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಅರಮನೆ,ಕಾರ್ಮಿಕ ಘಟಕದ ಅಧ್ಯಕ್ಷರಾದ ಪಿಕೆ ಇಂದ್ರಜಿತ್, ಹ್ಯಾಳ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಘವೇಂದ್ರ ಮುಖಂಡರಾದ ಆಟವಾಳ್ಳಿಗಿ ಸಂತೋಷ್ , ಹಾಗೂ ಪಟ್ಟಣ ಪಂಚಾಯತಿ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

Varthajala Daily, Bengaluru


Post a Comment

0 Comments

Ad Code

Responsive Advertisement