Ticker

6/recent/ticker-posts

Ad Code

Responsive Advertisement

ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ, ಪ್ರಮುಖವಾಗಿ ವಿಧೇಯಕದಲ್ಲಿ ಏನಿದೆ?

ಬೆಳಗಾವಿ, ಡಿ 21: ವಿಪಕ್ಷಗಳ ಭಾರೀ ವಿರೋಧದ ಮಧ್ಯೆಯೂ ಇಂದು ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ( ಆಂಟಿ ಕನ್‌ವರ್ಷನ್ ಬಿಲ್ ) ಮಂಡಿಸಲಾಯಿತು. ಮಧ್ಯಾಹ್ನದ ಊಟದ ವಿರಾಮದ ಬಳಿಕ ಶುರುವಾದ ಕಲಾಪದಲ್ಲಿ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ಗೃಹ ಸಚಿವ ಅರಗ ಜ್ಞಾನೇಂದ್ರ ವಿಧೇಯಕ ಮಂಡಿಸುತ್ತಿದ್ದ0ತೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜನ ವಿರೋಧಿ ಕಾಯಿದೆ ತಂದು ಅದನ್ನು ಪಾಸ್ ಮಾಡೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು. ಸಿಂಗಲ್ ಮೆಜಾರಿಟಿ ಇದೆ ಅಂತಾ ಏನು ಆಟ ಆಡ್ತಿರೇನ್ರಿ..? ಇಂತಹ ಕೆಟ್ಡ ಸರ್ಕಾರ ಕರ್ನಾಟಕದ ಇತಿಹಾಸದಲ್ಲೇ ಇಲ್ಲ ಎಂದು ಸರ್ಕಾರದ ವಿರುದ್ದ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಲ್ ಪ್ರತಿ ಹರಿದು ಹಾಕಿದನ್ನು ಸ್ಪೀಕರ್ ಖಂಡಿಸಿದರು. ಬಿಲ್ ಮಂಡನೆ ಬಗ್ಗೆ ನಿಮ್ಮ ವಿಪ್ ಗೆ ಹೇಳಿ ಕಳುಹಿಸಿದ್ದೇನೆ. ಬಿಲ್ ಚೆನ್ನಾಗಿ ನೋಡ್ಕೊಂಡು, ನಾಳೆ ಚರ್ಚೆಗೆ ಬನ್ನಿ ಎಂದು ಸ್ಪೀಕರ್ ಸೂಚಿಸಿದರು.

ಮತಾಂತರ ನಿಷೇಧ ವಿಧೇಯಕದಲ್ಲಿ ಇರುವ ಪ್ರಮುಖ ಅಂಶಗಳೇನು?

ಬಲವ0ತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.

*ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊ0ಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆ0ದು ಪರಿಗಣಿಸಲಾಗುವುದಿಲ್ಲ

*ಮತಾಂತರಗೊ0ಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.

ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ.

*ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ ೫೦ ಸಾವಿರ ದಂಡ ವಸೂಲಿಗೂ ಅವಕಾಶವಿದೆ.

*ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವ0ತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.

*ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.

* ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆ0ದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಾದ ನಿಯಮಗಳು

*ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ೩೦ ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.

* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ೩೦ ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

*ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬ0ದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

*ಮತಾಂತರಗೊ0ಡ ವ್ಯಕ್ತಿಯೂ ಮತಾಂತರಗೊ0ಡ ದಿನಾಂಕದಿ0ದ ಹಿಡಿದು ಮೂಲ ಧರ್ಮ, ಮತಾಂತರಗೊ0ಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.

*ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.

*ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ೩೦ ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಬೇಕು

-ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬ0ದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

Post a Comment

0 Comments

Ad Code

Responsive Advertisement