ನವದೆಹಲಿ, ಡಿ 30: ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬ0ದಿದೆ.
ಈಗಾಗಲೇ ಸೋಂಕು ನಿಯಂತ್ರಣಕ್ಕೆ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮುಂಬೈನಲ್ಲಿ ಸೋಂಕು ಹೆಚ್ಚುತ್ತಿರುವ ಸಂಬ0ಧ ನಿನ್ನೆ ಸರ್ಕಾರ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ದಿನವೊಂದಕ್ಕೆ ೨೦೦೦ ದಿಂದ ೨೨೦೦ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ದೆಹಲಿ ಮತ್ತು ಮುಂಬೈ ಹೊರತು ಪಡಿಸಿದ ಗುರ್ಗಾಂವ್, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಮತ್ತು ಅಹಮದಾಬಾದ್ ಸೇರಿದಂತೆ ಇತರೆ ನಗರದಲ್ಲಿ ಕೊರೋನಾ ಸೋಂಕು ಹೆಚ್ಚಿದೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ದೇಶದಲ್ಲಿ ಕಳೆದೊಂದು ವಾರದಿಂದ ದಿನಕ್ಕೆ ೮,೦೦೦ ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ೦.೯೨ ರಷ್ಟಿದೆ. ಎಂಟು ರಾಜ್ಯಗಳಲ್ಲಿ ಪ್ರತಿಶತ ೧೦ ಕ್ಕಿಂತ ಹೆಚ್ಚು ಪಾಸಿಟಿವಿಟಿ ದರಗಳನ್ನು ವರದಿ ಆಗಿದೆ.
ರಾಜ್ಯಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಈ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಮುಂಬೈ, ಪುಣೆ, ಥಾಣೆ, ಬೆಂಗಳೂರು, ಚೆನ್ನೈ, ಮುಂಬೈ ಉಪನಗರ ಮತ್ತು ಗುರುಗ್ರಾಮದಲ್ಲಿ ಪ್ರಕರಣಗಳ ಹೆಚ್ಚಳ ಕಂಡುಬ0ದಿದೆ.
ದೆಹಲಿ ಮತ್ತು ಮಹಾರಾಷ್ಟ್ರವು ಓಮೈಕ್ರಾನ್ ಪ್ರಕರಣಕ್ಕೆ ಹೆಚ್ಚುಗೊಂಡಿದೆ. ಈ ನಡುವೆ , ಕೋವಿಡ್ ರೂಪಾಂತರವು ಕಾಣಿಸಿಕೊಂಡ ೧೯ ರಾಜ್ಯಗಳಲ್ಲಿ ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಓಮೈಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.
ಗುರುವಾರ, ಭಾರತದಲ್ಲಿ ೧೩,೧೫೪ ಹೊಸ ಕೋವಿಡ್-೧೯ ಪ್ರಕರಣಗಳು ವರದಿಯಾಗಿವೆ, ಸಕ್ರಿಯ ಪ್ರಕರಣಗಳ ಸಂಖ್ಯೆ ೮೨,೪೦೨ ಪ್ರಕರಣಗಳು, ಸಾವಿನ ಸಂಖ್ಯೆ ೪,೮೦,೮೬೦ ಕ್ಕೆ ಏರಿದೆ.
Varthajala Daily, Bengaluru
0 Comments