Ticker

6/recent/ticker-posts

Ad Code

Responsive Advertisement

Breaking News: ದಕ್ಷಿಣ ಕನ್ನಡದಲ್ಲಿ ಗೆದ್ದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ!

ಮಂಗಳೂರು, ಡಿ 14: ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಂಜುನಾಥ ಮತ್ತು ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಮಂಜುನಾಥ ಭಂಡಾರಿ (2079) ೨೦೭೯ ಮತಗಳನ್ನು ಪಡದರೆ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ (3672) ೩೬೭೨ ಮತಗಳನ್ನು ಪಡೆದರು, ಇನ್ನು (5955) ೫೯೫೫ ಮತಗಳ ಪೈಕಿ (56) ೫೬ ಮತಗಳು ತಿರಸ್ಕೃತಗೊಂಡಿವೆ.

ಈ ಮಧ್ಯೆ, ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ ಆಯ್ಕೆಯಾದರೆ, ಕೋಟಾ ಶ್ರೀನಿವಾಸ ಪೂಜಾರಿ ನಾಲ್ಕನೇ ಬಾರಿಗೆ ಎಂಎಲ್ಸಿ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ.

ಮಾಧ್ಯಮದವರೊಂದಿಗೆ ಮಾತನ್ನಾಡಿದ ಕೋಟ ಶ್ರೀನಿವಾಸ ಪೂಜಾರಿ, ಹಣಬಲ ಇಲ್ಲದೇ ಬಿಜೆಪಿ ಗೆದ್ದಿದ್ದು, ಗೆಲುವಿನ ಶ್ರಮವನ್ನು ಪಕ್ಷದ ಕಾರ್ಯಕರ್ತರಿಗೆ ಸಮರ್ಪಿಸಬೇಕು ಎಂದರು. ಉಡುಪಿ ಮತ್ತು ದಕ್ಷಿಣ ಕನ್ನಡದ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದರಿಂದ ಚೊಚ್ಚಲ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಮಂಜುನಾಥ ಭಂಡಾರಿ ಹೇಳಿದರು. ಸ್ಪರ್ಧಿಸಿ ಗೆಲ್ಲಲು ಅವಕಾಶ ನೀಡಿದ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.

Varthajala Daily, Bengaluru

Post a Comment

0 Comments

Ad Code

Responsive Advertisement