ಬೆಳಗಾವಿ, ಡಿ. 24: ರಾಜ್ಯ ವ್ಯಾಪಿ ಎಪಿಎಂಸಿ ಮಾರುಕಟ್ಟೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಿದೆ ಎಂದು ಪರಿಷತ್ತಿನ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಗೋವಿಂದ ರಾಜು ಪ್ರಶ್ನೆಗೆ ಉತ್ತರಿಸಿದ ಅವರು, ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗಾಗಿ ಸಹಕಾರ ಸಚಿವರೊಂದಿಗೆ ಚರ್ಚೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಇನ್ನೂ, ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಪ್ರಾಂಗಣಗಳಲ್ಲಿ ಅವಕಾಶ ಇರುವುದರಿಂದ ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರಕಲು ಸಾಧ್ಯವಾಗುತ್ತಿದೆ ಎಂದ ಅವರು, ರಾಜ್ಯದಲ್ಲಿನ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಹಿಂದಿನ0ತೆ ಪ್ರಾಂಗಣದಲ್ಲಿ ಲೈಸನ್ಸ್ ಹೊಂದಿರುವ ನೇರ ಖರೀದಿ ಕೇಂದ್ರ, ರೈತ ಗ್ರಾಹಕ ಮಾರುಕಟ್ಟೆ ಪ್ರಾಂಗಣ ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
Varthajala Daily, Bengaluru
0 Comments