ಕೊಡಗು, ಡಿ. 24: ೨೦೨೨ರ (2022) ಜನವರಿ ೯ ರಿಂದ ೧೯ರ (9 to 19th) ವರೆಗೆ, ಹತ್ತು ದಿನಗಳ ಕಾಲ ಮೇಕೆದಾಟಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ವತಯಿಂದ ತಿಳಿದುಬಂದಿದೆ.
ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಆರಂಭಿಸುವ0ತೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಕೊಡಗಿನ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದರು. ಐದು ದಿನಗಳ ಹಿಂದೆ ತಮ್ಮ ಅಜ್ಜಿ ತೀರಿಕೊಂಡಿದ್ದ ಹಿನ್ನಲೆಯಲ್ಲಿ ಸೂತಕದ ಕಾರಣದಿಂದ ತಲಕಾವೇರಿಗೆ ಬಂದಿದ್ದರೂ ಕಾವೇರಿ ತೀರ್ಥ ಕುಂಡಿಕೆಯಿ0ದ ದೂರದಲ್ಲೇ ಕುಳಿತು ಡಿಕೆಶಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್ ಮತ್ತು ಇತರೆ ಪ್ರಮುಖರೆಲ್ಲರೂ ಅಗಸ್ತ್ಯಮುನಿ ಸನ್ನಿಧಿಯಲ್ಲಿ ಮಹಾಸಂಕಲ್ಪ ಪೂಜೆ ಸಲ್ಲಿಸಿದರು.
ಮೇಕೆದಾಟು ಯೋಜನೆಯಿಂದ ಒಂದೂವರೆ ಕೋಟಿಗಿಂತ ಹೆಚ್ಚು ಜನರಿಗೆ ಕುಡಿಯುವ ನೀರು ಸರಬರಾಜು ಮಾಡಬಹುದೆಂಬ ಮಾತನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ರವರು ಹೇಳಿದರು. ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ಒಂದೂವರೆ ಕೋಟಿಗಿಂತ ಹೆಚ್ಚು ಜನರಿಗೆ ಎಲ್ಲಾ ಕಾಲದಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ, ಜೊತೆಗೆ ೭ ಜಿಲ್ಲೆಗಳಿಗೆ (7 districts) ಅನುಕೂಲವಾಗಲಿದೆ. ಆದ್ದರಿಂದ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನ್ನಾಡಿದ ಅವರು ಯೋಜನೆ ಬೇಗ ಜಾರಿಯಾಗಬೇಕು ಎಂದು ಸರಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು. ಯೋಜನೆಗೆ ಬೇಕಾಗಿರುವ ೯೯೦೦ (9900) ಕೋಟಿ ರೂಪಾಯಿಗೆ ತಾಂತ್ರಿಕ ಅನುಮೋದನೆ ದೊರೆತ್ತಿದೆ. ಪರಿಸರಕ್ಕೆ ಸಂಬ0ಧಿಸಿದ0ತೆ ಕೇಂದ್ರ ಪರಿಸರ ಖಾತೆ ಇಲಾಖೆಯಿಂದ ನಿರಪೇಕ್ಷಣಾ ವರದಿ ಬೇಕಾಗಿದೆ. ಅದಾದಲ್ಲಿ ಯೋಜನೆ ಜಾರಿಗೆ ಯಾವುದೇ ಅಡೆತಡೆಗಳಿಲ್ಲ. ಯೋಜನೆ ಮಾಡುವುದರಿಂದ ಕೃಷಿ ಭೂಮಿ ಹೆಚ್ಚಿನ ಪ್ರಮಾಣದಲ್ಲಿ ಮುಳುಗಡೆ ಆಗುವುದಿಲ್ಲ. ಆದ್ದರಿಂದ ಹೆಚ್ಚಿನ ರೈತರಿಗೆ ಪರಿಹಾರ ಕೊಡಬೇಕಾಗಿ ಬರುವುದಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ಭೂಮಿ ಮುಳುಗಡೆಯಾಗುತ್ತದೆ. ಆದ್ದರಿಂದ ಯೋಜನೆಯನ್ನು ಬೇಗ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ವಿಚಾರವಾಗಿ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಹೇಳಿದರು. ನಮ್ಮ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಯಾರ ಹಂಗಿಲ್ಲ. ಇದನ್ನು ಸುಪ್ರೀಂ ಕೋರ್ಟ್ ಕೂಡ ಒತ್ತಿಹೇಳಿದೆ. ಆದ್ದರಿಂದ ಯೋಜನೆಯನ್ನು ಜಾರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತೇವೆ. ಅದಕ್ಕಾಗಿ ಮೇಕೆದಾಟಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಿದ್ದೇವೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ಈಗಾಗಲೇ ಮೇಕೆದಾಟು ಯೋಜನೆಗೆ ಜೆಡಿಎಸ್ ಒಪ್ಪಿಗೆ ಸೂಚಿಸಿದೆ ಎಂದರು.
ಯೋಜನೆಯಲ್ಲಿ ಕರ್ನಾಟಕಕ್ಕೆ ಎಷ್ಟು ನೀರು ಬಳಕೆ ಮಾಡಿಕೊಳ್ಳಬೇಕು, ತಮಿಳುನಾಡಿಗೆ ಎಷ್ಟು ನೀರು ಕೊಡಬೇಕು ಎನ್ನುವುದೆಲ್ಲವೂ ನಿರ್ಧಾರವಾಗಿದೆ. ಮೇಕೆದಾಟಿನಿಂದ ಕರ್ನಾಟಕಕ್ಕೆ ಬಳಕೆಯಾಗಬೇಕಾಗಿದ್ದ ಅಪಾರ ಪ್ರಮಾಣದ ನೀರು ಹರಿದು ಸಮುದ್ರ ಸೇರುತ್ತಿದೆ ಎಂದರು.
ಯೋಜನೆಯನ್ನು ತಮಿಳುನಾಡು ವಿರೋಧಿಸುತ್ತಿರುವುದಕ್ಕೆ ಸಂಬ0ಧಿಸಿದ0ತೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಮೇಕೆದಾಟಿನಿಂದ ಕರ್ನಾಟಕಕ್ಕೆ ಅಷ್ಟೇ ಅಲ್ಲ, ತಮಿಳುನಾಡಿಗೂ ಅನುಕೂಲವಾಗಲಿದೆ. ಆದರೆ ತಮಿಳುನಾಡು ರಾಜಕೀಯಕ್ಕಾಗಿ ಈ ಯೋಜನೆಯನ್ನು ವಿರೋಧಿಸುತ್ತಿದೆ ಎಂದರು.
೨೦೨೨ರ (2022) ಜನವರಿ ೯ ರಿಂದ ೧೯ ರವರೆಗೆ (9 to 19th) ಅಂದರೆ ಹತ್ತು ದಿನಗಳ ಕಾಲ ಮೇಕೆದಾಟಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಿದ್ದೇವೆ. ಅದರ ಅಂಗವಾಗಿ ನಾಡಿನ ಅಧಿದೇವತೆಯಂತಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡುತ್ತಿದ್ದೇವೆ ಎಂದರು.
Varthajala Daily, bengaluru
0 Comments