Ticker

6/recent/ticker-posts

Ad Code

Responsive Advertisement

Breaking News: ಇ.ಡಿ, ಸಿಬಿಐ ನಿರ್ದೇಶಕರ ಅಧಿಕಾರವಧಿ ವಿಸ್ತರಣೆಗೆ ಸಂಸತ್ ಒಪ್ಪಿಗೆ !

ನವದೆಹಲಿ, ಡಿ 14: ಕೇಂದ್ರ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ತನಿಖಾ ದಳ (ಸಿಬಿಐ) ನಿರ್ದೇಶಕರುಗಳ ಅವಧಿಯನ್ನು ಎರಡು ವರ್ಷಗಳಿಂದ ಐದು ವರ್ಷಗಳವರೆಗೆ ವಿಸ್ತರಿಸುಲು ಮಸೂದೆಯನ್ನು ಸಂಸತ್ತು (ಇಂದು) ಮಂಗಳವಾರ ಅಂಗೀಕರಿಸಿತು.

ಸಿಬಿಐ ನಿರ್ದೇಶಕರ ಅಧಿಕಾರವಧಿ ವಿಸ್ತರಿಸಲು ದೆಹಲಿ ವಿಶೇಷ ಪೊಲೀಸ್ ವ್ಯವಸ್ಥೆ (ತಿದ್ದುಪಡಿ) ಸುಗ್ರೀವಾಜ್ಞೆ-೨೦೨೧ (2021) ಮತ್ತು ಇ.ಡಿ ನಿರ್ದೇಶಕರ ಅಧಿಕಾರಾವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲು ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ-೨೦೨೧ (2021) ಅನ್ನು ಕೇಂದ್ರ ಸರ್ಕಾರವು ಈ ಹಿಂದೆ ಹೊರಡಿಸಿತ್ತು. ಅದಕ್ಕೆ ರಾಷ್ಟ್ರಪತಿ ಅವರು ಸಹಿ ಹಾಕಿದ್ದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಲ್ಎನ್ ರಾವ್ ನೇತೃತ್ವದ ಪೀಠವು, ಜಾರಿ ನಿರ್ದೇಶನಾಲಯದ ಎಸ್.ಕೆ.ಮಿಶ್ರಾ ಅವರ ಅಧಿಕಾರವಧಿಯ ವಿಸ್ತರಣೆ ಸಂಬ0ಧ ತೀರ್ಪು ನೀಡಿತ್ತು. ಅಪರೂಪದ ಹಾಗೂ ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಅಧಿಕಾರವಧಿ ವಿಸ್ತರಿಸಬಹುದು ಎಂದು ಪೀಠವು ಒತ್ತಿ ಹೇಳಿತ್ತು.

Varthajala Daily, Bengaluru

Post a Comment

0 Comments

Ad Code

Responsive Advertisement