Ticker

6/recent/ticker-posts

Ad Code

Responsive Advertisement

BELLARY ಬಳ್ಳಾರಿ: ಮೋಕಾದಲ್ಲಿ 'ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ


ಬಳ್ಳಾರಿ ಸೇರಿ ರಾಜ್ಯದ 12ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವಾ ಕೇಂದ್ರಗಳು ಏಕಕಾಲಕ್ಕೆ ಪ್ರಾರಂಭ:ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ, ಜ.27: ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಗ್ರಾಮ ಒನ್ ಸೇವಾ ಕೇಂದ್ರವನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಧವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕೆಲ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ಸಹ ಸೇವಾಕೇಂದ್ರದ ಮೂಲಕ ವಿತರಿಸಿದರು.

ಬಳ್ಳಾರಿ ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವೆಗಳಿಗೆ ಚಾಲನೆ ದೊರೆಯುತ್ತಿದೆ.ಜಿಲ್ಲೆಯಲ್ಲಿ ಇಂದಿನಿAದ 172 ಗ್ರಾಮ ಒನ್ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ ಎಂದರು. ಮುಖ್ಯಮಂತ್ರಿಗಳು ಬಳ್ಳಾರಿ ಸೇರಿದಂತೆ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವೆಗಳಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ. ಕಂದಾಯ, ಆರೋಗ್ಯ, ಆಹಾರ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 100 ಸರ್ಕಾರಿ ಸೇವೆಗಳು ಜನರ ಮನೆ ಬಾಗಿಲಿಗೆ ಬರಲಿದೆ. ಈ ಮೂಲಕ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದAತಾಗಿದೆ ಎಂದರು.

ನAತರ ವರ್ಚುವಲ್ ಮೂಲಕ ಮುಖ್ಯಮಂತ್ರಿಗಳೊAದಿಗೆ ಗ್ರಾಮ ಒನ್ ಸೇವೆಗಳ ಕುರಿತ ಸಭೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ,ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಸೋಮಶೇಖರ್ ರೆಡ್ಡಿ,ಬಿ.ನಾಗೇಂದ್ರ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್ ,ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ತಹಸೀಲ್ದಾರ್ ರೆಹಮಾನ್ ಪಾಶಾ ಮತ್ತಿತರರು ಇದ್ದರು.

Post a Comment

0 Comments

Ad Code

Responsive Advertisement