ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿಯು ಇಂದು ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಮತ್ತು ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ರೈತ ಪರ ಯೋಜನೆಗಳನ್ನು ಜಾರಿಗೊಳಿಸಿವೆ ಇದರ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಮೋರ್ಚಾದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಹಮ್ಮಿಕೊಳ್ಳಬೇಕೆಂದು ಕರೆ ನೀಡಿದರು.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ರೈತ ಮೋರ್ಚಾ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾದ ರಾಜಶೇಖರ ಆಹ್ವಾನಿತ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
0 Comments