ಪಣಜಿ: ತನ್ನ ತಂದೆಯ ಕ್ಷೇತ್ರ ಪಣಜಿಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದಕ್ಕೆ ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್, ಬಿಜೆಪಿ ತೊರೆದಿದ್ದಾರೆ.
ಅಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.
ಕಳೆದ ಚುನಾವಣೆ ಸಮಯದಲ್ಲಿ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದ್ದುಂಟು. ಅಂತೆಯೇ, ಎಷ್ಟೇ ಪ್ರಯತ್ನಿಸಿದರೂ ಪಣಜಿ ಕ್ಷೇತ್ರದ ಉಮೇದುವಾರಿಕೆಯನ್ನು ಪಡೆಯಲು ನನಗೆ ಸಾಧ್ಯವಾಗಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ಪಕ್ಷಕ್ಕೆ ಅವಕಾಶವಾದಿಯಾಗಿ ಬಂದವರಿಗೆ ಟಿಕೆಟ್ ನೀಡಲಾಗಿದೆ. ಅದಕ್ಕಾಗಿಯೇ ನಾನು ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿದ್ದೇನೆ. ಪಣಜಿ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಪರಿಕ್ಕರ್ ಪ್ರತಿಕ್ರಿಯಿಸಿರುವರು.
0 Comments