ಬೆಂಗಳೂರು: ನಗರದ ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಗರದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ನಗರ ಮತ್ತು ರಾಜ್ಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಕೋವಿಡ್ ಪ್ರಮಾಣ ತೀವ್ರವಾಗಿ ಹೆಚ್ಚುವ ಸಾಧ್ಯತೆ ಇದೆ. ಇದರ ನಿಗ್ರಹಕ್ಕೆ ಜನಜಾಗೃತಿ, ವಾರ್ಡ್ ಮಟ್ಟದಲ್ಲಿ ವಾರ್ ರೂಂ, ಕಾಲ್ ಸೆಂಟರ್ ಮಾಡಿ ಜನರ ಸೇವೆಯಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸೇವೆಯನ್ನು ಸಲ್ಲಿಸಬೇಕೆಂದು ಅಭಿಪ್ರಾಯಪಟ್ಟರು.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಅನಪೇಕ್ಷಿತವಾದುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಸರ್ವಪ್ರಯತ್ನವೂ ನಡೆದಿದೆ. ಕಾಂಗ್ರೆಸ್ಸಿಗರು ತಪ್ಪು ಮಾಹಿತಿ ನೀಡುತ್ತಿದ್ದು, ಈ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದರ ಕುರಿತು ಜನರಿಗೆ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು. ಈ ಸಭೆಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ, ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಭಾಗವಹಿಸಿದ್ದರು.
0 Comments