ಬೆಂಗಳೂರು ಜನವರಿ 26: 73ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ರಾಜ್ಯದ ಜನತೆಗೆ ಸಂದೇಶ ನೀಡಿದರು.
ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸರ್ಕಾರದಿಂದ ವೇದಿಕೆಯ ಮೇಲೆ ಬುಲೆಟ್ ಪ್ರೂಫ್ ಗ್ಲಾಸ್ ಸಿದ್ಧಪಡಿಸಲಾಗಿತ್ತು. ಆದರೆ ಘನತೆವೆತ್ತ ರಾಜ್ಯಪಾಲರು ಬುಲೆಟ್ ಪ್ರೂಫ್ ಗ್ಲಾಸ್ ಶೀಲ್ಡ್ ಅನ್ನು ತೆಗೆಸಿ, ಸಾಮಾನ್ಯ ವೇದಿಕೆಯಲ್ಲಿ ನಾಡಿನ ಜನತೆಗೆ ಸಂದೇಶ ನೀಡುವ ಮೂಲಕ ಗಮನ ಸೆಳೆದರು.
ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಸಚಿವರು ಅಧಿಕಾರಿಗಳು, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
0 Comments