ಬೆಂಗಳೂರು ಜನವರಿ 28.01.2022: ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ 62ನೇ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಟ್ವೀಟರ್ ನಲ್ಲಿ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿದ್ದಾರೆ.
"ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಆಯಸ್ಸು, ಉತ್ತಮ ಆರೋಗ್ಯ, ಸಂತೋಷ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಸೇವಾ ಸಮರ್ಪಣೆ ಅನುಕರಣೀಯವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
0 Comments