ಬಳ್ಳಾರಿ,ಜ.14: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿಯಾಗಿದ್ದು, ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಅರ್ಹತೆ ಆಧಾರದ ಮೇರೆಗೆ ಆಯ್ಕೆ ಮಾಡಿ ತುಂಬಬೇಕಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಅರ್ಜಿ ಸಲ್ಲಿಸುವಿಕೆಯ ಅವಧಿಯನ್ನು ಜ.31ರವರೆಗೆ ವಿಸ್ತರಿಸಲಾಗಿದೆ ಎಂದು ಆರಕ್ಷಕ ಮಹಾನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆ ನಿರ್ದೇಶಕರಾದ ರೇಣುಕಾ ಸುಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ನಮೂನೆ ಹಾಗೂ ಹುದ್ದೆಯ ಅರ್ಹತೆ ವಿವರಗಳನ್ನು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಜ.31ರೊಳಗಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಬಹುದಾಗಿದೆ.
0 Comments