Ticker

6/recent/ticker-posts

Ad Code

Responsive Advertisement

Flash News: ವಾಣಿಜ್ಯ ನಗರಿ ಮುಂಬೈಯಲ್ಲಿ ಎಲೆಕ್ಟ್ರಿಕ್ ಐಕಾನಿಕ್ ಡಬಲ್ ಡೆಕ್ಕರ್ ಬಸ್‌ಗಳು

ಮುಂಬೈ, ಜ 28: ದೇಶದ ಹೇಸರಾಂತ ವಾಣಿಜ್ಯ ನಗರಿಯಾದ ಮುಂಬೈಯಲ್ಲಿ ಐಕಾನಿಕ್ ಡಬಲ್ ಡೆಕ್ಕರ್ ಬಸ್‌ಗಳು ಸಂಚರಿಸಲಿವೆ ಎಂದು ಆದಿತ್ಯ ತಿಳಿಸಿದರು. ದಹನಕಾರಿ ಎಂಜಿನ್‌ಗಳ ಬದಲಿಗೆ ಎಲೆಕ್ಟ್ರಿಕ್ ಮೋಟಾರುಗಳು ಈ ಬಸ್‌ಗಳಿಗೆ ಶಕ್ತಿ ತುಂಬಲಿವೆ. ಬೃಹತ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಕಂಪನಿಯು ಮುಂಬೈಗೆ 900 ಎಸಿ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್‌ಗಳನ್ನು ನೀಡಲಿದೆ ಎಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

ನಗರದಲ್ಲಿ ಐಕಾನಿಕ್ ಡಬಲ್ ಡೆಕ್ಕರ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳಾದ ಉದ್ಧವ್ ಠಾಕ್ರೆ ಹಾಗು ನಾನು ವೈಯಕ್ತಿಕವಾಗಿ ಉತ್ಸುಕರಾಗಿದ್ದೇವೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಬೆಸ್ಟ್ ಕಂಪನಿಯ 900 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರವೆ ರಸ್ತೆಗೆ ಇಳಿಸುವ ಯೋಜನೆಯಲ್ಲಿದ್ದೇವೆ. ನಗರವನ್ನು ಹೊಗೆ ರಹಿತ ಮಾಡುವ ಉದ್ದೇಶ ನಮ್ಮದಾಗಿದೆ. 10,000 ಎಲೆಕ್ಟ್ರಿಕ್/ಕ್ಲೀನ್ ಪರ್ಯಾಯ ಇಂಧನ ಬಸ್‌ಗಳನ್ನು ಹೆಚ್ಚಿಸುವುದು ಮತ್ತು ಗರಿಷ್ಠ ಡಬಲ್ ಡೆಕ್ಕರ್ ಬಸ್‌ಗಳನ್ನು ಹೊಂದುದುವುದು ನಮ್ಮ ಗುರಿಯಾಗಿದೆ. ಇದು ನಮ್ಮ ಸಾಮಥ್ರ‍್ಯವನ್ನು ಹೆಚ್ಚಿಸುತ್ತದೆ ಎಂದರು.

ಬಿಡುವಿಲ್ಲದ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ಗಳು ಹೆಚ್ಚಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಇತರ ನಗರಗಳ ಮುನ್ಸಿಪಲ್ ಕಮಿಷನರ್‌ಗಳಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

Varthajala Daily, Bengaluru

Contact for advertisements 9448119247

Post a Comment

0 Comments

Ad Code

Responsive Advertisement