Ticker

6/recent/ticker-posts

Ad Code

Responsive Advertisement

ನೂತನ ಬಿಜೆಪಿ ಜಿಲ್ಲಾ ಕಚೇರಿ ಫೆ.12 ರಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟನೆ

 ಮಧುಗಿರಿ - ಬಿಜೆಪಿ ನೂತನ ಜಿಲ್ಲಾ ಕಚೇರಿಯನ್ನು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಫೆ.12 ರಂದು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟನೆ ಮಾಡುವ ಹಿತದೃಷ್ಠಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯವನ್ನು ಪ್ರಾರಂಭಿಸಲಿದ್ದು, ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಂದೀಶ್, ಶಾಸಕರುಗಳಾದ ರಾಜೇಶ್ ಗೌಡ, ಜ್ಯೋತಿಗಣೇಶ್, ಚಿದಾನಂದ ಗೌಡ, ಮಸಾಲೆ ಜಯರಾಮ್, ವೈ.ಎ.ನಾರಾಯಣಸ್ವಾಮಿ, ನವೀನ್, ಮಾಜಿ ಶಾಸಕ ಎಸ್.ಶಿವಣ್ಣ ಹಾಗೂ ಇನ್ನೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. 

ಮಧುಗಿರಿ ಮಂಡಲ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಜಿಲ್ಲಾ ಕಛೇರಿ ಮಧುಗಿರಿಯಲ್ಲಿ ಪ್ರಾರಂಭವಾಗುತ್ತಿರುವುದರಿಂದ ಕಾರ್ಯಕರ್ತರಿಗೆ  ತುಂಬಾ ಸಂತೋಷವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪದಾಧಿಕಾರಿಗಳಾದ ಲಕ್ಷ್ಮಿಪತಿ, ಮಾರುತಿ ಗಂಗಾಹನುಮಯ್ಯ, ಶ್ರೀನಿವಾಸ್, ಭರತ್, ಹನುಮಂತರಾಜ, ಸುರೇಶ್, ಕಂಬದ ರಂಗಪ್ಪ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಸೀತಾರಾಂ, ದೀಕ್ಷಿತ್, ರವಿ, ಮಂಜುನಾಥ, ತಿಮ್ಮಜ್ಜ, ಶ್ರೀಧರ್, ರಘು, ಜಗನ್ನಾಥ್, ರಾಮಕೃಷ್ಣ ಹಾಗೂ ಮುಂತಾದವರಿದ್ದರು.

Post a Comment

0 Comments

Ad Code

Responsive Advertisement