Ticker

6/recent/ticker-posts

Ad Code

Responsive Advertisement

1.5 ಲಕ್ಷ ಅಂಚೆ ಕಚೇರಿಗಳಲ್ಲಿ 100% ಕೋರ್ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಿ, ಸೌಲಭ್ಯ

 ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ಮಂಡಿಸಿದ 2022-23ನೇ ಸಾಲಿನ ಬಜೆಟ್ ನಲ್ಲಿ ‘ಡಿಜಿಟಲ್ ರೂಪಾಯಿಯನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರಸ್ತಾಪ ಪ್ರಕಟಿಸಿದ್ದಾರೆ.

2022-23ರಿಂದ ಅಂದರೆ ಪ್ರಸಕ್ತ ವರ್ಷದಿಂದಲೇ ಆರಂಭವಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ಡಿಜಿಟಲ್ ರೂಪಾಯಿ ಅನ್ನು ಹಣಕಾಸು ಮಾರುಕಟ್ಟೆಗೆ ಪರಿಚಯಿಸಲಿದೆಕೇಂದ್ರೀಯ ಬ್ಯಾಂಕ್  ಜಿಡಿಟಲ್ ಕರೆನ್ಸಿ(ಸಿಬಿಡಿಸಿ)ಯು ಡಿಜಿಟಲ್ ಆರ್ಥಿಕತೆಯನ್ನು ಹೆಚ್ಚಿಸಲಿದೆಡಿಜಿಟಲ್ ಕರೆನ್ಸಿ ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆಡಿಜಿಟಲ್ ಕರೆನ್ಸಿ ಬ್ಲಾಕ್ ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಲಿದೆ ಎಂದು ಸಚಿವರು ತಿಳಿಸಿದರು

Central Bank Digital Currency.jpg

ಡಿಜಿಟಲ್ ಬ್ಯಾಂಕಿಂಗ್:

ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಡಿಜಿಟಲ್ ಬ್ಯಾಂಕಿಂಗ್ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಹಣಕಾಸು ತಂತ್ರಜ್ಞಾನ ಆವಿಷ್ಕಾರಗಳು ತ್ವರಿತ ಗತಿಯಲ್ಲಿ ಬೆಳವಣಿಗೆ ಕಾಣುತ್ತಿವೆಡಿಜಿಟಲ್ ಬ್ಯಾಂಕಿಂಗ್‌ ಪ್ರಯೋಜನಗಳು ದೇಶದ ಮೂಲೆ ಮೂಲೆಯನ್ನು ಗ್ರಾಹಕ ಸ್ನೇಹಿಯಾಗಿ ತಲುಪುವಂತೆ ನೋಡಿಕೊಳ್ಳಲು ಸರ್ಕಾರವು ನಿರಂತರವಾಗಿ  ವಲಯಗಳನ್ನು ಪ್ರೋತ್ಸಾಹಿಸುತ್ತಿದೆ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆನಾವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಿಅಲ್ಲಿ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್ ಗಳಿಂದ 75 ಡಿಜಿಟಲ್ ಬ್ಯಾಂಕಿಂಗ್ ಶಾಖೆಗಳನ್ನು (ಡಿಬಿಯುಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಹಣಕಾಸು ಸಚಿವವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು.

ಯಾವುದೇ ಸಮಯ – ಯಾವುದೇ ಸ್ಥಳದಲ್ಲಿ ಅಂಚೆ ಕಚೇರಿ ಉಳಿತಾಯ:

ಮತ್ತೊಂದು ಪ್ರಮುಖ ಪ್ರಸ್ತಾವನೆ ಪ್ರಕಟಿಸಿರುವ ಹಣಕಾಸು ಸಚಿವರು,2022ರಲ್ಲಿ ಅಂದರೆ  ಇದೇ ವರ್ಷ ದೇಶದ 1.5 ಲಕ್ಷ ಅಂಚೆ ಕಚೇರಿಗಳಲ್ಲಿ 100% ಕೋರ್ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಲಾಗುವುದುಹಣಕಾಸಿನ ಸೇರ್ಪಡೆನೆಟ್ ಬ್ಯಾಂಕಿಂಗ್ಮೊಬೈಲ್ ಬ್ಯಾಂಕಿಂಗ್ಎಟಿಎಂಗಳ ಮೂಲಕ ಜನರ ಖಾತೆಗಳನ್ನು ಪ್ರವೇಶ ಸಕ್ರಿಯಗೊಳಿಸಲಾಗುತ್ತದೆಪೋಸ್ಟ್ ಆಫೀಸ್ ಖಾತೆ ಮತ್ತು ಬ್ಯಾಂಕ್ ಖಾತೆ ನಡುವಿನ ಹಣ ಆನ್‌ಲೈನ್ ವರ್ಗಾವಣೆಯನ್ನು ಸಹ ಒದಗಿಸುತ್ತದೆಇದು ವಿಶೇಷವಾಗಿ ಗ್ರಾಮೀಣ ಪ್ರದೇಶದ ರೈತರು ಮತ್ತು ಹಿರಿಯ ನಾಗರಿಕರಿಗೆ ಸಹಕಾರಿಯಾಗಲಿದೆ.  ಪರಸ್ಪರ ಕಾರ್ಯಸಾಧ್ಯತೆ ಮತ್ತು ಹಣಕಾಸು ಸೇರ್ಪಡೆಯನ್ನು ಇದು ಸಕ್ರಿಯಗೊಳಿಸುತ್ತದೆ.

ಡಿಜಿಟಲ್ ಪಾವತಿ ವ್ಯವಸ್ಥೆ:

ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾದ ಡಿಜಿಟಲ್ ಪಾವತಿ ವ್ಯವಸ್ಥೆಗೆ ಹಣಕಾಸಿನ ನೆರವು ಪ್ರಸ್ತಾವನೆಯನ್ನು  ಬಜೆಟ್ ಅವಧಿಗೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವರು ಪ್ರಕಟಿಸಿದರುಇದು ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಅಳವಡಿಸಿಕೊಳ್ಳಲು ಉತ್ತೇಜನ ನೀಡುತ್ತದೆಆರ್ಥಿಕ ಮತ್ತು ಬಳಕೆದಾರ ಸ್ನೇಹಿಯಾಗಿರುವ ಪಾವತಿ ವೇದಿಕೆಗಳ ಬಳಕೆಯನ್ನು ಉತ್ತೇಜಿಸಲು ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.


Post a Comment

0 Comments

Ad Code

Responsive Advertisement