Ticker

6/recent/ticker-posts

Ad Code

Responsive Advertisement

ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗದ ಅಧ್ಯಕ್ಷರ ಹುದ್ದೆಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಧಾಪಿಸಲು ಮಕ್ಕಳ ಹಕ್ಕುಗಳ ರಕ್ಷಣೆಯ ಅಧಿನಿಯಮ-2005ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-09-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಧಾಪಿಸಿದ್ದು, ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
 ಆಯೋಗದ ಅಧ್ಯಕ್ಷರ ಅವಧಿಯು 3 ವರ್ಷದ್ದಾಗಿದ್ದು, ಅಧ್ಯಕ್ಷರ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿ  62 ವರ್ಷದೊಳಗಿರಬೇಕು. ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಮಕ್ಕಳ ಹಕ್ಕುಗಳನ್ನು ಪ್ರತಿಪಾದಿಸುವ ಕ್ಷೇತ್ರಗಳಲ್ಲಿ ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
ಆಸಕ್ತರು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆಗಾಗಿ ಆಯೋಗದ ವೆಬ್‍ಸೈಟ್ http:/www.kscpcr.karnataka.gov.in   ಹಾಗೂ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವೆಬ್‍ಸೈಟ್ http:/www.dwcd.karnataka.gov.in ನಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22115290/92 ಹಾಗೂ ಆಯೋಗದ ವಿಳಾಸ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, 4ನೇ ಮಹಡಿ, ಕೃಷಿ ಭವನ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ (ಹಡ್ಸನ್ ವೃತ್ತ),    ಬೆಂಗಳೂರು-5600002ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments

Ad Code

Responsive Advertisement