Ticker

6/recent/ticker-posts

Ad Code

Responsive Advertisement

ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು: ರಾಜೇಂದ್ರ ರಾಜಣ್ಣ

 ಮಧುಗಿರಿ - ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯೆ ರಾಜೇಂದ್ರ ರಾಜಣ್ಣ ತಿಳಿಸಿದರು.

ಪಟ್ಟಣದ ಎಂ.ಎನ್.ಕೆ ಸಮುದಾಯಭವನದಲ್ಲಿ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಾಹಿತಿ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮಾಹಿತಿ ತಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಡಿಜಿಟಲ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜಿಲ್ಲೆಯಲ್ಲಿಯೇ ಪ್ರಥಮವಾಗಿ ಮಧುಗಿರಿಯಲ್ಲಿ ಪ್ರಾರಂಭಿಸಲಾಗಿದ್ದು, 252 ಬೂತ್‍ಗಳಿಂದ 70 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದರು. 

ಬಿ.ಜೆ.ಪಿ ಪಕ್ಷದ ಜನ ವಿರೋಧಿ ನೀತಿಯಿಂದಾಗಿ ರಾಜ್ಯದ ಜನತೆ ಕಾಂಗ್ರೇಸ್ ಪಕ್ಷಕ್ಕೆ ಆಶೀರ್ವದಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಕೆ.ಎನ್.ರಾಜಣ್ಣ ಸಚಿವರಾಗಲಿದ್ದಾರೆ ಎಂದ ಅವರು. ನನ್ನನ್ನು ವಿಧಾನಪರಿಷತ್ ಸದಸ್ಯನ್ನನ್ನಾಗಿ ಮಾಡಲು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಶ್ರಮಿಸಿದ್ದು, ನಾನು ಅವರೆಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು. 

ಹಿಜಾಬ್ ವಿಚಾರದಲ್ಲಿ ಬಿಜೆಪಿ ಪಕ್ಷದವರು ಯುವ ಜನತೆಯನ್ನು ಪ್ರಚೋಧಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಇದಕ್ಕೆಲ್ಲಾ ವಿಧ್ಯಾರ್ಥಿಗಳು ಆಸ್ಪದ ನೀಡದೆ ಓಧಿನತ್ತ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪಾವಗಡ ಜಿ.ಪಂ ಮಾಜಿ ಸದಸ್ಯ ಹೆಚ್.ವಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸುವ ಮೂಲಕ ಕಾಂಗ್ರೇಸ್ ಪಕ್ಷವನ್ನು ಬಲಿಷ್ಠಗೊಳಿಸಲು ನಾವೇಲ್ಲರೂ ಕೈ ಜೋಡಿಸಬೇಕು ಎಂದರು.

ಡಿಜಿಟಲ್ ಸದಸ್ಯತ್ವ ನೋಂದಣಿ ಸಮಿತಿ ಸಂಚಾಲಕ ಅನಿಲ್ ಹಾಗೂ ಮಧುಗಿರಿ ಉಸ್ತುವಾರಿ ಶ್ರೀನಾಥ್ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು.

ಜಿ.ಪಂ ಮಾಜಿ ಸದಸ್ಯ ಜಿ.ಜೆ.ರಾಜಣ್ಣ, ರಾಜ್ಯ ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ, ಮುಖಂಡರುಗಳಾದ ಎಂ.ಕೆ.ನಂಜುಂಡಯ್ಯ, ಬಿ.ನಾಗೇಶ್ ಬಾಬು, ಎಂ.ಎಸ್.ಶಂಕರನಾರಾಯಣ್, ಸುದೇಶ್ ಬಾಬು, ಎಂ.ಎಸ್.ಚಂದ್ರಶೇಖರ್ ಹಾಗೂ ಮುಂತಾದವರು ಇದ್ದರು.

Post a Comment

0 Comments

Ad Code

Responsive Advertisement