Ticker

6/recent/ticker-posts

Ad Code

Responsive Advertisement

ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಬೆಂಗಳೂರು: ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತ ಉಂಟಾಯಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿ ಅವರು ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳುತ್ತಾರೆಂಬ ನಮ್ಮೆಲ್ಲರ ನಿರೀಕ್ಷೆಯನ್ನು ಹುಸಿ ಮಾಡಿ ಅಗಲಿದ್ದಾರೆ. ಅವರಿಲ್ಲದಿರುವಿಕೆ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿ ಮಾಡಿದೆ ಎನ್ನುವುದು ನನ್ನ ಅಭಿಪ್ರಾಯ



ಹೂವು ಹೊರಳುವುವು ಸೂರ್ಯನ ಕಡೆಗೆ

ನಮ್ಮ ದಾರಿ ಬರಿ ಚಂದ್ರನವರೆಗೆ

ಇರುಳಿನ ಒಡಲಿಗೆ ದೂರದ ಕಡಲಿಗೆ

ಮುಳುಗಿದಂತೆ ದಿನ ಬೆಳಗಿದಂತೆ

ಹೊರ ಬರುವನು ಕೂಸಿನ ಹಾಗೆ//

"

ಇಂಥ ಅನನ್ಯ ಕಾವ್ಯ ರಚಿಸಿದ ಅವರು ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರು, ನಾಡಿನ ಜನರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Post a Comment

0 Comments

Ad Code

Responsive Advertisement