Ticker

6/recent/ticker-posts

Ad Code

Responsive Advertisement

ಮೇಸ್ತ್ರಿಪಾಳ್ಯ ಕೆರೆ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ಬೆಂಗಳೂರಿನ ಪ್ರತಿಷ್ಠಿತ ಕೋರಮಂಗಲದ ಮೇಸ್ತ್ರಿಪಾಳ್ಯ ಕೆರೆ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಕೋರಮಂಗಲದಲ್ಲಿರುವ ಮೇಸ್ತ್ರಿಪಾಳ್ಯ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು .

ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷರಾದ ಮೋಹನ್ ದಾಸರಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಷ್ಟಿತ  ಬಡಾವಣೆಗಳಲ್ಲಿರುವ ಇಂಥ ದೊಡ್ಡ ಕೆರೆಯನ್ನು ಸಂರಕ್ಷಿಸಬೇಕು ಹಾಗೂ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಪಡಿಸಿದರು. 

ಕೋರಮಂಗಲ ಹಾಗೂ ಕೆರೆಯ ಸುತ್ತಮುತ್ತಲಿನ ಸಾರ್ವಜನಿಕರು ಆಮ್ ಆದ್ಮಿ ಪಕ್ಷದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಈ ಕೆರೆಯ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು .

ಪ್ರತಿಭಟನೆಯಲ್ಲಿ ಅಶೋಕ್ ಮೃತ್ಯುಂಜಯ, ಜಗದೀಶ್ಚಂದ್ರ, ವೀಣಾ ಸೆರಾವ, ಕಲೈಅರಸನ್ ಹಾಗೂ ಅನೇಕ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು .


Post a Comment

0 Comments

Ad Code

Responsive Advertisement