Ticker

6/recent/ticker-posts

Ad Code

Responsive Advertisement

ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ.

 ಮಧುಗಿರಿ : ರಾಯಚೂರು ಕೋರ್ಟ್ ಆವರಣದಲ್ಲಿ ಸಂವಿಧಾನ ದಿನಾಚರಣೆ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಅವರು ವೃತ್ತಿ ಗೌರವಕ್ಕೆ ಧಕ್ಕೆ ತಂದಿರುವುದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ, ಮಹಾ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ.



ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ನ್ಯಾಯಾಧೀಶರನ್ನು ಕೂಡಲೇ ವಜಾ ಮಾಡಬೇಕೆಂದು ಎಂದು ಅಖಿಲ ಕರ್ನಾಟಕ ಶ್ರೀ ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಸಂಘದ ಅಧ್ಯಕ್ಷ ಶ್ರೀಹರಿ ಗಣೇಶ್ ಒತ್ತಾಯಿಸಿದ್ದಾರೆ. 

ಪಟ್ಟಣದ ಉಪವಿಭಾಗಾಧಿಕಾರಿಗಳು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರು ನ್ಯಾಯಾಧೀಶ ಸ್ಥಾನದಲ್ಲಿ ಕೂರಲು ಅರ್ಹತೆಯುಳ್ಳವರಲ್ಲ . ಇವರ ಹಿನ್ನೆಲೆ ತಿಳಿಯದೇ ಇವರಿಗೆ ನ್ಯಾಯಾಧೀಶರ ಹುದ್ದೆ ನೀಡಿರಬಹುದು. ಈ ಕೂಡಲೇ ಇವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣವನ್ನು ದಾಖಲಿಸಬೇಕು . ತನಿಖೆ ನಡೆಸಿ ನ್ಯಾಯಾಧೀಶ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ನಂಜುಂಡ, ರಾಜ್‍ಕುಮಾರ್, ಧನುಂಜಯ್, ನಾಗರಾಜು, ಕೋಟಪ್ಪ ಹಾಗೂ ಮುಂತಾದವರು ಇದ್ದರು. 

ವರದಿ:ನಾಗೇಶ್ ಜೀವಾ ಮಧುಗಿರಿ

Post a Comment

0 Comments

Ad Code

Responsive Advertisement