ಲತಾ ಮಂಗೇಶ್ಕರ್ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಮರ್ಪಣೆ
ಬೆಂಗಳೂರು: ಇಂದು ವಿಧಿವಶರಾದ ಗಾನಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ಭಾವಚಿತ್ರಕ್ಕೆ ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಪಕ್ಷದ ಪ್ರಮುಖರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು ಭಾರತದ ಹಲವಾರು ಭಾಷೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ನಿಧನದಿಂದ ಗಾಯನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಎನ್.ರವಿಕುಮಾರ್ ಅವರು ತಿಳಿಸಿದರು. ದೇಶಭಕ್ತಿಗೆ ಉತ್ತೇಜನ, ನಮ್ಮ ಧರ್ಮಕ್ಕೆ ಪ್ರೋತ್ಸಾಹ ನೀಡಿದ ಮಹಾನ್ ವ್ಯಕ್ತಿತ್ವ ಅವರದು ಎಂದು ನುಡಿದರು.
0 Comments