ಬೆಂಗಳೂರು, ಫೆ 15: ನಾಡಿನಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಜಾರಿ ಮಾಡುವುದು, ನಮ್ಮ ನೀರಾವರಿ ಹಕ್ಕುಗಳನ್ನು ಸಾಧಿಸಿಕೊಳ್ಳುವುದು ಸೇರಿದಂತೆ ಇಡೀ ರಾಜ್ಯಕ್ಕೆ ಜಲ ಸಮಾನತೆ ಕಲ್ಪಿಸಿ ಸಮಗ್ರ ಪ್ರಗತಿ ಸಾಧಿಸುವ ಪರಿಕಲ್ಪನೆಯೊಂದಿಗೆ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಕಾರ್ಯಕ್ರಮ ಶೀಘ್ರವೇ ಶುರುವಾಗಲಿದೆ. ಶುದ್ಧ ಕುಡಿಯುವ ನೀರು, ಬೇಸಾಯಕ್ಕೆ ಅಗತ್ಯ ನೀರು ಕೊಡುವ ಉದ್ದೇಶ ನಮ್ಮದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ದೇವಾನಂದ್ ಚವಾಣ್ ಮಾತನಾಡಿ; ನಮ್ಮ ಪಕ್ಷಕ್ಕೆ ಸೇರ್ಪಡೆಯಾದ ಶಿವಾನಂದ ಪಾಟೀಲ್ ಅವರಿಗೆ ಸ್ವಾಗತ. ಅವರಿಂದ ಪಕ್ಷಕ್ಕೆ ಒಳ್ಳೆಯದಾಗಲಿ ಎಂದರು.
ಪಕ್ಷದ ಭಾವುಟ ನೀಡುವ ಮೂಲಕ ಕುಮಾರಸ್ವಾಮಿ ಅವರು ಶಿವಾನಂದ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಮುಖಂಡರಾದ ಸುನೀತಾ ಚವಾಣ್ ಸೇರಿದಂತೆ ಸಿಂದಗಿ ಕ್ಷೇತ್ರದ ಅನೇಕ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.
0 Comments