ಬೆಂಗಳೂರು, ಫೆ 22: ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ.
ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಲೇಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ರಾಜ್ಯದಲ್ಲಿ ಇಂಥ ಕೆಟ್ಟ ವಾತಾವರಣ ಉಂಟಾಗಲು ರಾಜ್ಯ ಸರಕಾರವೇ ಕಾರಣ. ಅವರ ಅಸಮರ್ಪಕ ಕಾರ್ಯ ವೈಖರಿಯಿಂದ ಇಡೀ ಶಿಕ್ಷಣ ಕ್ಷೇತ್ರ ಬಂದ್ ಮಾಡಿ ಕೂರಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. ಇನ್ನು ಹೈಕೋರ್ಟ್ ಅಂತೂ ಬಿಬಿಎಂಪಿಗೆ ನಿತ್ಯವೂ ಛೀಮಾರಿ ಹಾಕುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನೀಡಿದೆ. ನಿಮ್ಮನ್ನು ಜೈಲಿಗೆ ಹಾಕಬೇಕಿತ್ತು. ಆದರೂ ಔದಾರ್ಯ ತೋರಿಸಿದ್ದೇವೆ ಎಂದು ನ್ಯಾಯಮೂರ್ತಿಗಳೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಸರಕಾರಕ್ಕೆ ಜನರ ಬಗ್ಗೆ ಬದ್ಧತೆ ಇದೆಯಾ? ಬಹಳ ನೊಂದು ಈ ಮಾತನ್ನು ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
Varthajala daily, Bengaluru
0 Comments