ಬೆಂಗಳೂರು, ಫೆ 04: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿಕೊಂಡು ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ಕೊಡುವುದಿಲ್ಲ.
ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.
ಈ ವಿವಾದ ಇದೀಗ ಹೈಕೋರ್ಟ್ ಪರಿಶೀಲನೆಯಲ್ಲಿದೆ. ಹೈಕೋರ್ಟ್ ನೀಡುವ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ಮೊದಲೂ ರಾಜ್ಯದ ಹಲವೆಡೆ ನಮ್ಮ ಸಮುದಾಯದ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರುತ್ತಿದ್ದರು. ಅಂಥ ಸ್ಥಳಗಳಲ್ಲಿ ಮೊದಲಿನಂತೆಯೇ ವ್ಯವಸ್ಥೆ ಮುಂದುವರಿಸಬೇಕು. ಹೊಸದಾಗಿ ಹಿಜಾಬ್ ಧರಿಸಿ ಬಂದ ಕಡೆ ತಡೆಯೊಡ್ಡಿದ್ದಾರೆ. ಅಂಥ ಸ್ಥಳಗಳಲ್ಲಿ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಿಕ್ಷಣ ಸಚಿವರು ನನಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
Varthajala Daily, Bengaluru
Contact for advertisements 9448119247
0 Comments