ಬೆಂಗಳೂರು, ಫೆ 18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ಜಕ್ಕೂರು ವಾರ್ಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದುಕೊರತೆಗಳನ್ನು ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪೂರ್ಣಿಮಾ ರವರು ಇಂದು ಖುದ್ದು ಆಲಿಸಿದರು.
ಈ ವೇಳೆ ಎಲ್ಲಾ ಪೌರಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಕೈಗವಸು (ಹ್ಯಾಂಡ್ ಗ್ಲೌಸ್) ವಿತರಿಸಿ, ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ತಿಳಿಸಿದರು.
Varthajala daily, Bengaluru
0 Comments