Ticker

6/recent/ticker-posts

Ad Code

Responsive Advertisement

Flash News: ಬೀದಿಬದಿ ವ್ಯಾಪಾರಿಗಳು ತರಬೇತಿ ಪಡೆದು ಪ್ರಮಾಣ ಪತ್ರ ಪಡೆಯಬೇಕು

ಬೆಂಗಳೂರು , ಫೆ 17: ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ತರಬೇತಿ ಪಡೆದು ಪ್ರಮಾಣ ಪತ್ರ ಪಡೆಯುವ ಬಗ್ಗೆ. ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯದ ರಾಜರಾಜೇಶ್ವರಿ ನಗರದಲ್ಲಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 9 ವಾರ್ಡ್ ಗಳು ಹಾಗೂ ಯಶವಂತ ಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 5 ವಾರ್ಡ್ ಗಳಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳಿಗೆ ತಿಳಿಯಪಡಿಸುವುದೇನೆಂದರೆ, ತಾವು ತಯಾರಿಸಿ ಮಾರಾಟ ಮಾಡುವ ಆಹಾರ ಪದಾರ್ಥಗಳು ಸುರಕ್ಷತೆಯಿಂದ, ಸ್ವಚ್ಛತೆಯಿಂದ ಮತ್ತು ಗುಣಮಟ್ಟದಿಂದ ಕೂಡಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುವುದು ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಅತ್ಯವಶ್ಯವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸಂಸ್ಥೆಯ ವತಿಯಿಂದ ಆಹಾರ ಸುರಕ್ಷತೆ, ಸ್ವಚ್ಛತೆ ಮತ್ತು ಗುಣಮಟ್ಟ ಇತ್ಯಾದಿ ವಿಷಯಗಳ ಬಗ್ಗೆ(FSSAI Training) ತರಬೇತಿ ನೀಡಿ ಪ್ರಮಾಣಪತ್ರ ನೀಡಲಾಗುವುದು. 

ಆದುದರಿಂದ ಮೇಲ್ಕಂಡ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ಸದರಿ ತರಬೇತಿ ಮತ್ತು ಪ್ರಮಾಣಪತ್ರ ಪಡೆಯಲು ತಮ್ಮ ವಿವರಗಳೊಂದಿಗೆ ಪಾಲಿಕೆ ರಾಜರಾಜೇಶ್ವರಿ ನಗರ ವಲಯದ ಕಲ್ಯಾಣಾಧಿಕಾರಿಗಳ ಕಛೇರಿ(ಕಲ್ಯಾಣ ಶಾಖೆ), 18ನೇ ಕ್ರಾಸ್, ಐಡಿಯಲ್ ಹೋಮ್ಸ್ ಟೌನ್ ಶಿಪ್, ಬೆಂಗಳೂರು-98 ಇಲ್ಲಿ ಸಂಪರ್ಕಿಸಿ ದಿನಾಂಕ: 28.02.2022 ರೊಳಗೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ತಿಳಿಸಿದೆ. ಹಾಗೂ ನಂತರದ ದಿನಗಳಲ್ಲಿ(FSSAI) ಪ್ರಮಾಣ ಪತ್ರವಿಲ್ಲದೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲವೆಂದೂ ಸಹ ಎಚ್ಚರಿಸಿದೆ.

Varthajala daily, Bengaluru


Post a Comment

0 Comments

Ad Code

Responsive Advertisement