Ticker

6/recent/ticker-posts

Ad Code

Responsive Advertisement

Flash News: ಮಹಿಳೆಯರಿಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ವಿಡಿಯೋ ಕಳಿಸುತ್ತಿದ್ದವನ ಬಂಧನ

ಬೆ0ಗಳೂರು, ಫೆ 18: ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಮತ್ತು ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಕುಚೇಷ್ಟ-ವಿಕೃತಕಾಮಿ-ಕಿಡಿಗೇಡಿ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ.



ಹಾಸನ ಜಿಲ್ಲೆಯ ಅರಕಲಗೂಡಿನ ಕುಂಚೇನಹಳ್ಳಿಯ ಹರೀಶ ಎಂಬಾತನೆ ಬಂಧಿತ ಆರೋಪಿ ಎಂಬುದು ತಿಳಿದುಬಂದಿದೆ.

ಹರೀಶ ಕಳೆದ ಮೂರು ತಿಂಗಳಿ0ದ ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಶ್ಲೀಲ ವೀಡಿಯೋ, ಫೋಟೋ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ.

ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ ಮೇರೆಗೆ, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರತಿದಿನ ಇದೇ ರೀತಿ ಅನೇಕ ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ, ಸಂದೇಶವನ್ನು ಕಳುಹಿಸಿ ಕಿರುಕುಳ ನೀಡುತ್ತಿರುವುದು ಗೊತ್ತಾಗಿದೆ. ಆತನನ್ನು ಬಂಧಿಸಿದ ಪೊಲೀಸರು ಮುಂದಿನ ಕಾನೂನಿನ ರೀತಿಯ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Varthajala daily, Bengaluru

Post a Comment

0 Comments

Ad Code

Responsive Advertisement