Ticker

6/recent/ticker-posts

Ad Code

Responsive Advertisement

Flash News: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಫೆ 22: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂ ಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಶೀಘ್ರವೇ ತಾವು ಕೂಡ ಖುದ್ದು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ವಿಧಾನ ಮಂಡಲ ಕಲಾಪವನ್ನು ಸರಕಾರ ಸಮರ್ಪಕವಾಗಿ ನಡೆಸದ ಬಗ್ಗೆ ನಮ್ಮ ಪಕ್ಷದ ವತಿಯಿಂದ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.

Varthajala daily, Bengaluru

Post a Comment

0 Comments

Ad Code

Responsive Advertisement