Ticker

6/recent/ticker-posts

Ad Code

Responsive Advertisement

Flash News: ಕರ್ನಾಟಕದಲ್ಲಿ ಕೇಸರಿ ಶಾಲು, ಹಿಜಾಬ್ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು: ಸಿಪಿಐ-ಎಂ ನಾಯಕ ಕರೀಂ ಪತ್ರ

ನವದೆಹಲಿ, ಫೆ ೦9: ಕರ್ನಾಟಕದಲ್ಲಿ ಕೇಸರಿ ಶಾಲು, ಹಿಜಾಬ್ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಸಿಪಿಐ-ಎಂ ನಾಯಕ ಕರೀಂ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ಕೇಸರಿ ಶಾಲು, ಹಿಜಾಬ್ ವಿವಾದ ಬಗೆಹರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜ್ಯಸಭೆ (ಸಿಪಿಐ-ಎಂ) ಸದಸ್ಯ ಎಲ್ಮರಮ್ ಕರೀಂ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕು, ಇಲ್ಲದಿದ್ದರೆ ಈ ವಿವಾದವು ದೇಶವ್ಯಾಪ್ತಿ ಹಬ್ಬುವ ಲಕ್ಷಣ ಕಾಣುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರೀಂ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Varthajala Daily, Bengaluru

Post a Comment

0 Comments

Ad Code

Responsive Advertisement