Ticker

6/recent/ticker-posts

Ad Code

Responsive Advertisement

Flash News: ಕೇಸರಿ ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ 18: ಮಾಧ್ಯಮಗಳಲ್ಲಿ ಬಂದ ಈಶ್ವರಪ್ಪ ಅವರ ಪ್ರತಿಕ್ರಿಯೆ ಇವತ್ತಿನ ಈ ರೀತಿಯ ಕಲಾಪಗಳಿಗೆ ಕಾರಣವಾಗಿದೆ.

ಅದಕ್ಕಿಂತಲೂ ಹೆಚ್ಚಿನ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಕಾರವಾರದ ಸಂಸದರೊಬ್ಬರು ಹಿಂದೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂಬಂತೆ ಮಾತನಾಡಿದ್ದರು. ಬಿಜೆಪಿಯವರ ಅಜೆಂಡಾಗಳೇ ಈ ರೀತಿ ಇವೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಬದುಕಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ‌ ಅವರು. ಇಂತಹ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಕೇಸರಿ ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ. ಅದರ ಬಗ್ಗೆ ನಮಗೂ ಪೂಜ್ಯ ಭಾವನೆ ಇದೆ. ಧಾರ್ಮಿಕ ಕ್ಷೇತ್ರದಲ್ಲಿ ಕಠಿಣ ಜೀವನಶೈಲಿ ರೂಢಿಸಿಕೊಂಡವರು ಕೇಸರಿ ಧರಿಸುತ್ತಾ ಇದ್ದರು. ಈಗ ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ. ಬಿಜೆಪಿ ಅಯೋಧ್ಯ ಮಂದಿರ ಕಟ್ಟುವ ಚಳುವಳಿ ಶುರು ಮಾಡಿದಾಗ ಈ  ಬಳಸುವುದನ್ನು ಬಿಜೆಪಿ ಶುರು  ಮಾಡಿದ್ದರು. ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಬದಲಾವಣೆ ತರಲು ಅವರು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

Varthajala daily, Bengaluru


Post a Comment

0 Comments

Ad Code

Responsive Advertisement