Ticker

6/recent/ticker-posts

Ad Code

Responsive Advertisement

Flash News: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಳಿಗೆಗಳ ಮೇಲೆ ಅನಿರೀಕ್ಷಿತ ತಪಾಸಣೆ ಹಾಗೂ ದಂಡ

ಬೆAಗಳೂರು, ಫೆ 22: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಸಲು ಅವಕಾಶವಿರುವುದಿಲ್ಲ. ಈ ಸಂಬAಧ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಆಯಾ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ವಲಯವಾರು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ.

ಪಾಲಿಕೆಯ ಎಂಟೂ ವಲಯ ವ್ಯಾಪ್ತಿಯಲ್ಲಿ ವಲಯ ಮಾರ್ಷಲ್ ಮೇಲ್ವಿಚಾರಕ, ವಿಭಾಗದ ಮೇಲ್ವಿಚಾರಕ, ಸಕಾಯಕ ಕಾರ್ಯಪಾಲಕ ಇಂಜಿನಿಯರ್, ಕಿರಿಯ ಆರೋಗ್ಯ ನಿರೀಕ್ಷಕ ಹಾಗೂ ಮಾರ್ಷಲ್ ಗಳನ್ನೊಳಗೊಂಡ ತಂಡವು ಮಾರಾಟ ಮಾಡುವ ಮಳಿಗೆಗಳಿಗೆ ಅನಿರೀಕ್ಷ್ಷಿತ ಭೇಟಿ ನೀಡಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಉಪಯೋಗಿಸುತ್ತಿರುವುದು ಕಂಡುಬAದರೆ ಅದನ್ನು ವಶಪಡಿಸಿಕೊಂಡು ದಂಡ ವಿಧಿಸುವ ಕೆಲಸ ಮಾಡುತ್ತಿದ್ದಾರೆ. 

ಅದರಂತೆ, ನಿನ್ನೆ ದಕ್ಷಿಣ ವಲಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪಾದಿರುವ ಎರಡು ಘಟಕಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಿದ್ದಾರೆ. ಈ ಪೈಕಿ ಪದ್ಮನಾಭನಗರ ವಾರ್ಡ್, ಸುಬ್ರಮಣ್ಯಪುರ ಮುಖ್ಯ ರಸ್ತೆಯಲ್ಲಿರುವ ಅಗ್ರಿ ಎಂಟರ್‌ಪ್ರೈಸೆಸ್ ಘಟಕಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಸಮಯದಲ್ಲಿ ನಿಷೇದಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡುಬAದಿದ್ದು, ಹಳೆಯ ದಂಡ 5 ಲಕ್ಷ ರೂ. ಹಾಗೂ ಹೊಸದಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 6 ಲಕ್ಷ ರೂ. ದಂಡವನ್ನು ಚೆಕ್ ಮೂಲಕ ಪಡೆದು 200 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಜೊತೆಗೆ ಪದ್ಮನಾಭ ನಗರ ವಾರ್ಡ್, ಗೌಡನಪಾಳ್ಯ ಬಳಿಯಿರುವ ಗ್ರೇಸ್ ಪಾಲಿಮರ್ಸ್ ಘಟಕಕ್ಕೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿಯೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ಕಂಡು 25 ಸಾವಿರ ರೂ. ದಂಡ ವಿಧಿಸಿ ಚೆಕ್ ಮೂಲಕ ಹಣ ಪಡೆಯಲಾಗಿರುತ್ತದೆ. ಈ ವೇಳೆ ಮತ್ತೊಮ್ಮೆ ನಿಷೇಧಿತ ಪ್ಲಾಸ್ಟಿಕ್ ಉತ್ಪಾದಿಸದಂತೆ ಎಚ್ಚರಿಕೆಯನ್ನು ನೀಡಲಾಗಿರುತ್ತದೆ. 

ಮಾರ್ಷಲ್ ಗಳಿಂದ ತಪಾಸಣೆ ಹಾಗೂ ಜಾಗೃತಿ:

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್ ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಮಾರಾಟಗಾರರು ಹಾಗೂ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ನಗರದಲ್ಲಿ ಯಾರಾದರೂ ಒಮ್ಮೆ ಬಳಸುವ ಪ್ಲಾಸಿಕ್ ಬಳಕೆ ಮಾಡುವುದು ಕಂಡಬAದಲ್ಲಿ ನಿಯಮಾನುಸಾರ ಕಾನೂನು ರೀತಿಯ ಕ್ರಮ ಜರುಗಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.

Varthajala daily, Bengaluru

Post a Comment

0 Comments

Ad Code

Responsive Advertisement