ಬೆಂಗಳೂರು, ಫೆ 22: ಆಡಳಿತಾರೂಢ ಬಿಜೆಪಿ ಹಾಗೂ ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕುಮ್ಮಕ್ಕಾಗಿ ವಿಧಾನಮಂಡಲದ ಕಲಾಪವನ್ನು ಸಂಪೂರ್ಣವಾಗಿ ಹಾಳು ಮಾಡಿವೆ.
2022-2023ನೇ ವರ್ಷದ ಮೊದಲ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಇದಾಗಿತ್ತು. ಸದನದಲ್ಲಿ ಚರ್ಚೆಗೆ ಅವಕಾಶಗಳು ಸಿಗಲಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳಿಂದ ಇದು ಆಗಲಿಲ್ಲ. ಆದರೆ ಆಡಳಿತ ಪಕ್ಷದ ಸದಸ್ಯರು ವಂದನಾ ನಿರ್ಣಯದ ಮೇಲೆ ಮಾತನಾಡಿದರೂ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಬಿಟ್ಟು ಬರೀ ಮೋದಿ ಅವರ ಸಾಧನೆಗಳ ಬಗ್ಗೆ ಮಾತ್ರ ಹೇಳಿದರು ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
ಸಿಎಂ ಅವರು ಕಾಂಗ್ರೆಸ್ ಧರಣಿ ಮಧ್ಯೆ ಉತ್ತರ ನೀಡಿದ್ದಾರೆ. ರಾಜ್ಯದ ವಿಧಾನ ಮಂಡಲದ ಇತಿಹಾಸದಲ್ಲಿ ಮೊದಲನೇ ಬಾರಿ ಈ ರೀತಿ ಕಲಾಪ ಬಲಿಯಾಗಿದೆ. ಅತ್ಯಂತ ಮಹತ್ವದ ವಿಚಾರಗಳು ಸದನದಲ್ಲಿ ಚರ್ಚೆ ಆಗಬೇಕಿತ್ತು. ಹಲವಾರು ಬಾರಿ ನಾನು ಹೇಳಿದ್ದೇನೆ. ಗಲಾಟೆ ಮಾಡುವವರನ್ನು ಹೊರ ಹಾಕಿ ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಆದರೆ, ನಮ್ಮ ಮನವಿಯನ್ನು ಪರಿಗಣಿಸದೇ, ನಮ್ಮ ಪಕ್ಷಕ್ಕೆ ಮಾತನಾಡಲು ಅವಕಾಶವನ್ನು ನೀಡದೇ ಕಲಾಪವನ್ನು ಪ್ರತಿಷ್ಠೆಗೆ ಬಲಿ ಕೊಡಲಾಗಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.
Varthajala daily, Bengaluru
0 Comments