ಬೆಂಗಳೂರು, ಫೆ 17: ಹಿಜಾಬ್ ಮತ್ತು ಕೇಸರಿ ಶಾಳುಗಳ ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಅಲ್ಲೆಲ್ಲಾ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾದಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು.
ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಈ ಸಂದರ್ಭದಲ್ಲಿ ಪಕ್ಷದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವೆಂಕಟರಾವ್ ನಾಡಗೌಡ ಅವರು ಹಾಜರಿದ್ದರು.
Varthajala daily, Bengaluru
0 Comments