Ticker

6/recent/ticker-posts

Ad Code

Responsive Advertisement

Flash News: ಕೇಸರಿ ಪವಿತ್ರ ವಸ್ತ್ರ: ಕುಮಾರಸ್ವಾಮಿ

ಬೆಂಗಳೂರು, ಫೆ 17: ಪವಿತ್ರವಾದ ಕೇಸರಿ ಪಾವಿತ್ರ‍್ಯತೆ ಹಾಳು ಮಾಡುವುದು ಬೇಡ. ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು ಅದರ ಪಾವಿತ್ರ‍್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್ ಎಸ್ ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ. ನಾಚಿಕೆಯಾಗಬೇಕು ಬಿಜೆಪಿಯವರಿಗೆ ಈ ವಿಚಾರವಾಗಿ.

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ ಅವರು ಮುಂದೊ0ದು ದಿನ ಕೆಂಪುಕೋಟೆ ಮೇಲೂ ಕೇಸರಿ ಭಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಭಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಭಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಭಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವೆಂಕಟರಾವ್ ನಾಡಗೌಡ ಅವರು ಹಾಜರಿದ್ದರು.

Varthajala daily, Bengaluru

Post a Comment

0 Comments

Ad Code

Responsive Advertisement