Ticker

6/recent/ticker-posts

Ad Code

Responsive Advertisement

Flash News: ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ 18: ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ  ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು  ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ.

ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ' ರಾಜಕೀಯ ಕೋವಿಡ್ ದುರಂತ ' ಇದು. ಈ ವಿನಾಶಕಾರಿ  ಕೋವಿಡ್ ಅನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ನಾವು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸದನಕ್ಕೆ ಬಂದಿದ್ದೆವು. ಆದರೆ ಇವರು ಹಿಜಾಬ್ ಮತ್ತು ಕೇಸರಿ ಶಾಲು ಎಂದು ಕಲಾಪವನ್ನು ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ಅವರು ಹೇಳಿದರು.

Varthajala daily, Bengaluru


Post a Comment

0 Comments

Ad Code

Responsive Advertisement