ಬೆಂಗಳೂರು, ಫೆ 18: ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್ ಗೊಂದಲ ಮತ್ತಿತರ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತೆ ಆಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್ ತೆಗೆದು, ಮನೆಗೆ ಹೋಗುವಾಗ ಮತ್ತೆ ಧರಿಸಿ ಹೋಗುತ್ತಿದ್ದರು.
ಆರಂಭದಲ್ಲೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಭಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು ಕುಮಾರಸ್ವಾಮಿ ಅವರು.
Varthajala daily, Bengaluru
0 Comments