Ticker

6/recent/ticker-posts

Ad Code

Responsive Advertisement

Smash News: ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಚರ್ಚೆ!!

ರಾಮನಗರ, ಫೆ 11: ಕೇಸರಿ ಶಾಲು-ಹಿಜಾಬ್ ಕದನದ ನಂತರ ಎಚ್ಚೆತ್ತ ಶಿಕ್ಷಣ ಇಲಾಖೆಯು ಶಾಲಾ-ಕಾಲೇಜುಗಳಲ್ಲಿ-ಶಿಕ್ಷಣ ಸಂಸ್ಥೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಚರ್ಚೆ ನಡೆಸುತ್ತಿದೆ.

ಇನ್ನೂ ಈ ಕೇಸರಿ ಶಾಲು ಮತ್ತು ಹಿಜಾಬ್ ವಿವಾದದಿಂದ ಸದ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಚರ್ಚೆ ನಡೆಸುತ್ತಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್ ವರ್ಸಸ್ ಕೇಸರಿ ಶಾಲು ಕಿಡಿ, ಈಗ ದೇಶವ್ಯಾಪಿ ವ್ಯಾಪಿಸಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಂಘರ್ಷಗಳು ಉಂಟಾಗಿವೆ. ಇನ್ನೂ ಈ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಸದ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಚರ್ಚೆ ನಡೆಸುತ್ತಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಮನಗರದಲ್ಲಿ ಹೇಳಿಕೆ ನೀಡಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಮೊಬೈಲ್ ಫೋನ್ ಪೂರಕವಾಗಿದೆ. ಮೊಬೈಲ್ನಿಂದ ಅನುಕೂಲ, ಅನಾನುಕೂಲ ಎರಡೂ ಇದೆ. ಮುಂದೆ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Varthajala Daily, Bengaluru

Contact for advertisements 9448119247

Post a Comment

0 Comments

Ad Code

Responsive Advertisement