Ticker

6/recent/ticker-posts

Ad Code

Responsive Advertisement

ಶಿಕ್ಷಕರುಗಳಿಗೆ ಕಾಲ್ಪನಿಕ ವೇತನ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಸಮಿತಿ ರಚನೆ ಮಾಡಿ ಅಗತ್ಯ ಕ್ರಮ

ಬೆಂಗಳೂರು, ಮಾರ್ಚ್ 22 (ಕರ್ನಾಟಕ ವಾರ್ತೆ) :ರಾಜ್ಯದ ಅನುದಾನಿತ ಶಾಲಾ / ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಕಾಲ್ಪನಿಕ ವೇತನ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಸಮಿತಿ ರಚನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.


ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನಪರಿಷತ್ತಿನ ಸದಸ್ಯರುಗಳಾದ ಡಾ. ವೈ.ಎ. ನಾರಾಯಣಸವಾಮಿ, ಮಾನ್ಯ ಸರ್ಕಾರಿ ಮುಖ್ಯ ಸಚೇತಕರು, ಅರುಣ ಶಹಾಪುರ, ಕೆ.ಟಿ. ಶ್ರೀಕಂಠೇಗೌಡ, ಶಶಿಲ್ ನಮೋಶಿ, ಎಸ್.ವ್ಹಿ. ಸಂಕನೂರ, ಎಸ್.ಎಲ್ ಬೋಜೇಗೌಡ ಹಾಗೂ ನಿರಾಣಿ ಹಣಮಂತ್ ರುದ್ರಪ್ಪ ಇವರುಗಳು ನಿಯಮ 330ರಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು  ರಾಜ್ಯದ ಅನುದಾನಿತ   ಶಾಲಾ ಕಾಲೇಜುಗಳಲ್ಲಿ  ಕೆಲಸ ನಿರ್ವವಹಿಸುತ್ತಿರುವ ಶಿಕ್ಷಕರುಗಳಿಗೆ ಕಾಲನಿಕ ವೇತನ ನೀಡುವ ಕುರಿತು ರಚನೆಯಾಗಿದ್ದ  ಬಸವರಾಜ ಹೊರಟ್ಟಿ ರವರ ಅಧ್ಯಕ್ಷತೆಯ ಸಮಿತಿಯು ದಿನಾಂಕ: 17-03-2015 ಮತ್ತು 06-02-2018 ರಂದು ಎರಡು ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ.

 

ಅನುದಾನಸಂಹಿತೆ ಪ್ರಕಾರ ಅನುದಾನಕ್ಕೊಳಪಟ್ಟ ಸಿಬ್ಬಂದಿಗೆ ಅನುದಾನ ದೊರೆತ ದಿನಾಂಕದಿಂದ ಮಾತ್ರ ಕನಿಷ್ಟ ವೇತನ ನಿಗದಿ ಮಾಡಬೇಕು ಹಾಗೂ ಹಿಂದಿನ ಸೇವಾವಧಿಯನ್ನು ಯಾವುದೇ ಸೇವಾ ಸೌಲಭ್ಯಕ್ಕೆ ಪರಿಗಣಿಸುವಂತಿಲ್ಲಈ ಸಂಬಂಧ  ದಿನಾಂಕ: 01-06-1995ರಿಂದಲೇ  ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ 

ಕರ್ನಾಟಕ  ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂಧಿಗಳ (ವೇತನನಿವೃತ್ತಿ ವೇತನ ಮತ್ತು ಇತರ ಸೌಲಭ್ಯಗಳ ನಿಯಂತ್ರಣಅಧಿನಿಯಮ 2014ನ್ನು ಜಾರಿಗೆ ತರಲಾಗಿದೆ.

  ಅಧಿನಿಯಮವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ಪ್ರಶ್ನಿಸಿರುವ ರಿಟ್ಆರ್ಜಿಗಳಾದ 21216/2014 ಮತ್ತು 14307/2014 ಮತ್ತು ತತ್ತಬಂಧದ ಪ್ರಕರಣಗಳಲ್ಲಿ ಮಾನ್ಯ ಉಚ್ಚನ್ಯಾಯಾಲಯವು ದಿನಾಂಕ:10-07-2015ರಂದು ನೀಡಿದ ತೀರ್ಪಿನಲ್ಲಿ ಸದರಿ ಅಧಿನಿಯಮವನ್ನು "struck down" ಮಾಡಿರುತ್ತದೆ.

 

ಮೇಲಿನ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸರ್ಕಾರವು ಮಾನ್ಯ ಉಚ್ಚ ನ್ಯಾಯಾಲಯ,  ಬೆಂಗಳೂರು ಇಲ್ಲಿ ರಿಟ್ ಆಪೀಲು ಸಂಖ್ಯೆ 2476/2015 ಮತ್ತು 2467/2015ನ್ನು ದಾಖಲಿಸಿದೆಮೇಲಿನ ರಿಟ್ ಅರ್ಜಿಗಳಲ್ಲಿ ನೀಡಿದ ತೀರ್ಪಿಗೆ ದಿನಾಂಕ 27-11-2015ರಂದು ತಡೆಯಾಜ್ಞೆ ನೀಡಿರುತ್ತದೆಸರದಿ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿದ್ದುಪ್ರಕರಣವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ.

 

ಬಸವರಾಜ ಹೊರಟ್ಟಿರವರ ಅಧ್ಯಕ್ಷತೆಯ ಸಮಿತಿಯ ವರದಿ ಮತ್ತು ಇಲಾಖೆಗಳಲ್ಲಿನ ವಾಸ್ತವ ಅಂಕಿ ಅಂಶಗಳನ್ನು ಪರಿಶೀಲಿಸಲಾಗಿಹಾಲಿ ನೀಡಲಾಗುತ್ತಿರುವ ವೇತನಕ್ಕೆ ಅನುದಾನ ರಹಿತ ಅವರಿಯನ್ನು ಪರಿಗಣನೆಗೆ ತೆಗೆದುಕೊಂಡು ವೇತನವನ್ನು ಪರಿಷ್ಕರಿಸಿದಲ್ಲಿ ಹೆಚ್ಚುವರಿಯಾಗಿ ವಾರ್ಷಿಕವಾಗಿ ರೂ.359,87ಕೋಟಿಗಳ ಅನುದಾನವು ಬೇಕಾಗುತ್ತದೆಆದರೆಅವರಿಗೆ ಹಿಂಬಾಕಿ ಮತ್ತು ಪಿಂಚಣಿಗಾಗಿ ತಗಲುವ ಅಂದಾಜು ವೆಚ್ಚವು ಪ್ರಸ್ತಾಪಿತ ರೂ. 359.87 ಕೋಟಿಗಳಲ್ಲಿ ಒಳಗೊಂಡಿರುವುದಿಲ್ಲರೂ.359.87 ಕೋಟಿ ಒಂದು ವರ್ಷಕ್ಕೆ ಬೇಕಾದ ಹೆಚ್ಚುವರಿ ಮೊತ್ತವಾಗುತ್ತದೆ ಅನುಕೂಲ ಪಡೆಯುವ ಸಿಬ್ಬಂದಿ ಪೂರ್ಣ ಸೇವಾವಧಿಯಲ್ಲಿ ಪಡೆಯುವ ಮೊತ್ತದ ಒಟ್ಟು ಮೊತ್ತದ ಲೆಕ್ಕಾಚಾರ ಇಲಾಖೆಗಳಲ್ಲಿ ಇನ್ನು ಆಗಿರುವುದಿಲ್ಲಹಾಗೆಯೇ ನಿವೃತ್ತಿ ಸೌಲಭ್ಯಗಳ ಒಟ್ಟಾರೆ ಆರ್ಥಿಕ ಹೊರೆ ಅಂದಾಜು ರೂ. 1637.00 ಕೋಟಿಗಿಂತ ಹೆಚ್ಚಾಗಿದ್ದುಇದರ ವರ್ಷವಾರು ಆರ್ಥಿಕ ಹೊರೆ ಸಹ  ಲೆಕ್ಕಹಾಕಿರುವುದಿಲ್ಲಈ ಎರಡೂ ಮೊತ್ತಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆಅನುದಾನರಹಿತ ಸೇವಾವಧಿಯನ್ನು ಪರಿಗಣಿಸಿದಲ್ಲಿ ನೀಡಬೇಕಾದ ವೇತನ ಬಾಕಿ (Arrears) ಮೊತ್ತ ರೂ.3083.00 ಕೋಟಿಗಳೆಂದು ಅಂದಾಜಿಸಲಾಗಿದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿಕಾಲನಿಕ ವೇತನ ಬಡ್ತಿಯನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ನಿಲುವನ್ನು ತಳೆಯಲು ಸಾಧ್ಯವಾಗಿರುವುದಿಲ್ಲಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮಿತಿಯನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.


Post a Comment

0 Comments

Ad Code

Responsive Advertisement