Ticker

6/recent/ticker-posts

Ad Code

Responsive Advertisement

ಕ್ಯಾನ್ಸರ್ ಪತ್ತೆ ಹಚ್ಚುವ ಮೂಲಕ ಜೀವಗಳನ್ನು ಉಳಿಸಬಹುದು

 ಮಧುಗಿರಿ : ಕ್ಯಾನ್ಸರ್ ಕಾಯಿಲೆಯನ್ನು ಬೇಗ ಪತ್ತೆ ಹಚ್ಚುವ ಮೂಲಕ ಜೀವಗಳನ್ನು ಉಳಿಸಬಹುದು ಎಂದು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಮಧುಗಿರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ತುಮಕೂರು ಶಾಖೆ ಹಾಗೂ ಬೆಂಗಳೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ  ಮಾತನಾಡಿದ ಅವರು, ತಂಬಾಕು ಸೇವನೆಯಿಂದ ವಿವಿಧ ಬಗೆಯ ಕ್ಯಾನ್ಸರ್ ಖಾಯಿಲೆಗಳು ಮನುಷ್ಯರನ್ನು ಕಾಡುತ್ತಿವೆ. ಇಂತಹ ಮಾರಣಾಂತಿಕ ಖಾಯಿಲೆಯ ಬಗ್ಗೆ ಹಾಗೂ ಅದನ್ನು ಪತ್ತೆಹಚ್ಚುವ ಸರಳ ಮಾರ್ಗಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ಹೆಚ್.ಒ ನಾಗೇಂದ್ರಪ್ಪ, ಆರೋಗ್ಯ ಇಲಾಖೆ ಉಪನಿರ್ದೇಶಕ ಡಾ.ನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ, ಡಾ.ಮೋಹನ್ ದಾಸ್, ಜಿಲ್ಲಾ ಮಲೇರಿಯಾ ನಿಯಂತ್ರಣ  ಅಧಿಕಾರಿ ಡಾ. ಪುರುಷೋತ್ತಮ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಹಿಮಾ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ್, ಟಿ.ಹೆಚ್.ಒ ರಮೇಶ್ ಬಾಬು,  ಡಾ.ಗಂಗಾಧರ್, ಡಾ.ರತ್ನವತಿ, ಆರೋಗ್ಯ ಶಿಕ್ಷಣಾಧಿಕಾರಿ  ಧರಣೇಶ್ ಗೌಡ, ಹರೀಶ್, ಲ್ಯಾಪ್ ಟೆಕ್ನಿಷನ್ ಶಿವರಾಜ್ ಮತ್ತು ತಿಮ್ಮರಾಜು ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:ನಾಗೇಶ್ ಜೀವಾ ಮಧುಗಿರಿ

Post a Comment

0 Comments

Ad Code

Responsive Advertisement