ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗೆ ಸೇರ್ಪಡೆಯಾಗಲು ಮಾರ್ಚ್ 31 ರವರೆಗೆ ಅವಧಿ ವಿಸ್ತರಣೆ:*
ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 491/SVEEP-II/Online Contest/2022 ದಿನಾಂಕ: 05.02.2022ರ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆ-2022 ಅಂಗವಾಗಿ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ “ನನ್ನ ಮತ ನನ್ನ ಭವಿಷ್ಯ- ಒಂದು ಮತದ ಶಕ್ತಿ” ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲಾಗಿರುತ್ತದೆ.
ಅದರಂತೆ, ರಾಷ್ಟ್ರೀಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆ, ಸ್ಲೋಗನ್ ಸ್ಪರ್ಧೆ, ಗಾಯನ ಸ್ಪರ್ಧೆ, ಚಿತ್ರೀಕರಣ ಸ್ಪರ್ಧೆ ಹಾಗೂ ಪೋಸ್ಟರ್ ವಿನ್ಯಾಸ ಸ್ಪರ್ಧೆ ಸೇರಿದಂತೆ 5 ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಸಂಸ್ಥೆ, ವೃತ್ತಿಪರ ಹಾಗೂ ಹವ್ಯಾಸಿ ಎಂಬ ಮೂರು ವರ್ಗಗಳಲ್ಲಿ ವಿಂಗಡಿಸಿ ಆ ಮೂಲಕ ಬಹುಮಾಹನಗಳನ್ನು ನೀಡಲಾಗುತ್ತದೆ.
ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ಪರ್ಧೆಯ ವೆಬ್‌ಸೈಟ್ (http://ecisveep.nic.in/contest)ನಲ್ಲಿ ವಿವರವಾದ ಮಾರ್ಗಸೂಚಿಗಳು, ನಿಯಮಗಳು, ಮತ್ತು ಷರತ್ತುಗಳ ಮೂಲಕ ಹೋಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ಪರ್ಧೆಯ ವೆಬ್‌ಸೈಟ್‌ನಲ್ಲಿ ರಿಜಿಸ್ಟರ್ ಮಾಡಿಕೊಂಡು, ಸಂಬಂಧಿಸಿದ ಎಲ್ಲಾ ರೀತಿಯ ಸಂಪೂರ್ಣ ವಿವರ(ತಮ್ಮ ಹೆಸರು, ಸ್ಪರ್ಧಿಸುತ್ತಿರುವ ವರ್ಗದ ವಿವರವನ್ನು ಇ-ಮೆಲ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು)ಗಳನ್ನು 15 ಮಾರ್ಚ್ 2022 ರೊಳಗಾಗಿ voter-contest@eci.gov.in ವೆಬ್‌ಸೈಟ್‌ನಲ್ಲಿ ನಮೂದಿಸಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ 31 ಮಾರ್ಚ್ 2022 ರವರೆಗೆ ನಮೂದಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
0 Comments