Ticker

6/recent/ticker-posts

Ad Code

Responsive Advertisement

ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ

 ಮಧುಗಿರಿ - ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ತಿಳಿಸಿದರು.

ತಾಲ್ಲೂಕಿನ ಗಂಜಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದೇನಹಳ್ಳಿ ಸಮೀಪ ರಾಯಮ್ಮನ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ್ತಈ ಭಾಗ ಹಿಂದುಳಿದ ಪ್ರದೇಶವಾಗಿದ್ದು, ಈ ಭಾಗದಲ್ಲಿ ಉತ್ತಮ ರಸ್ತೆ ನಿರ್ಮಾಣವಾಗಬೇಕಾಗಿದೆ ಮತ್ತು ಮೂಲಭೂತ ಸಮಸ್ಯೆಗಳ ನಿವಾರಣೆ ಆಗಬೇಕಾಗಿದೆ ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ರಾಯಮ್ಮನ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳು ಹೆಚ್ಚಾಗಿ ಜಾತ್ರೆಗೆ ಬರುತ್ತಿದ್ದು ಅವರ ಅನುಕೂಲಕ್ಕಾಗಿ ವಿಧಾನಪರಿಷತ್ ಸದಸ್ಯರ ಅನುದಾನದಲ್ಲಿ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ .ಅಡುಗೆ ಕೋಣೆ  ನಿರ್ಮಿಸಲಾಗುವುದೆಂದು ಭರವಸೆ ನೀಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೆ ಎನ್. ರಾಜಣ್ಣ ಅವರನ್ನು ಆಯ್ಕೆ ಮಾಡಿ ಆ ಮೂಲಕ ಮಧುಗಿರಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ.ರಾಜಣ್ಣ, ನಿರ್ದೇಶಕ ಬಿ.ನಾಗೇಶ್ ಬಾಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾವಿತ್ರಮ್ಮ ಡಿಹೆಚ್ ನಾಗರಾಜು, ಗ್ರಾಮ ಪಂಚಾಯತ್ ಸದಸ್ಯರಾದ ವೀರೇಶ್, ದಾಸೇಗೌಡ, ಮಾಲಾ ಓಬಣ್ಣ, ರಾಮಚಂದ್ರಪ್ಪ, ಮುಖಂಡರುಗಳಾದ ಎಮ್.ಬಿ.ಮರಿಯಣ್ಣ, ನಾಗರಾಜು, ಪಾಪಯ್ಯ, ಪಟೇಲ್ ರಾಯಣ್ಣ, ದೊಡ್ಡ ರಾಯಣ್ಣ, ಹನುಮಂತರಾಯಪ್ಪ, ರಘು ಹಾಗೂ ಮತ್ತಿತರರು ಹಾಜರಿದ್ದರು.

ವರದಿ:ನಾಗೇಶ್ ಜೀವಾ ಮಧುಗಿರಿ

Post a Comment

0 Comments

Ad Code

Responsive Advertisement