Ticker

6/recent/ticker-posts

Ad Code

Responsive Advertisement

Breaking News: ಚುನಾವಣೆ ಸೋಲಿನ ಕುರಿತು ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ, ಮಾ.10: ದೇಶದ ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬೆನ್ನೆಲ್ಲೇ ಕೆಪಿಸಿಸಿ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಶೀಘ್ರದಲ್ಲೇ ಪಕ್ಷದ ಮುಖಂಡರ ಜೊತೆ ಪರಾಮರ್ಶೆ ಸಭೆ ನಡೆಸಲಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪರಾಮರ್ಶೆ ಮಾಡುವ ಸಲುವಾಗಿ ಪಕ್ಷದ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿಯವರು ಈ ಸಭೆ ಕರೆದಿದ್ದು, ಸೋಲಿಗೆ ಕಾರಣ ಕುರಿತು ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.

ಈ ನಡುವೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ರಾಹುಲ್‌ಗಾಂಧಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, 'ಜನರ ತೀರ್ಪನ್ನ ವಿನಮ್ರವಾಗಿ ಒಪ್ಪಿಕೊಳ್ಳುತ್ತೇವೆ. ಗೆದ್ದವರಿಗೆ ಶುಭ ಹಾರೈಕೆಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ನನ್ನ ಕೃತಜ್ಞತೆಗಳು. ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ' ಎಂದಿದ್ದಾರೆ.

Varthajala, Daily, Bengaluru

Post a Comment

0 Comments

Ad Code

Responsive Advertisement