Ticker

6/recent/ticker-posts

Ad Code

Responsive Advertisement

KASARAGODU : ಕಾಸರಗೋಡಿನಲ್ಲಿ ಸಾಂಸ್ಕತಿಕ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಮನವಿ

ಬೆಂಗಳೂರು, ಮಾರ್ಚ್ 11 (ಕರ್ನಾಟಕ ವಾರ್ತೆ) : ಕಾಸರಗೋಡಿನ ಕನ್ನಡಿಗರ ಸಾಂಸ್ಕøತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಆಸಕ್ತಿ ತೋರಿದ್ದು, ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು – ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕತಿಕ ಭವನ ಕಟ್ಟಡ ಕಟ್ಟಲು ಅನುಕೂಲವಾಗುವಂತೆ ಕಾಸರಗೋಡಿನಲ್ಲಿ ಉಚಿತ ನಿವೇಶನ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಕಾಸರಗೊಡಿನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಭಂಡಾರಿ ಸ್ವಾಗತ ರಣವೀರಚಂದ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


ಈ ಸಂಬಂಧ ಇಂದು ಕಾಸರಗೋಡಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 11.00 ಗಂಟೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತೀಹಳ್ಳಿ ಹಾಗೂ ಮುಂತಾದವರು ಭಾಗವಹಿಸಿದ್ದರು.

ಮಧ್ಯಾಹ್ನ 12.00 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ಸಭೆ ನಡೆಸಿದ ಪ್ರಾಧಿಕಾರದ ಅಧ್ಯಕ್ಷರು,  ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲೆ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಿ, ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು. ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕತಿಕ ಭವನ ನಿರ್ಮಾಣವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪಾಧಿಕಾರದಿಂದ ಈ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement