ಬೆಂಗಳೂರು, ಏಪ್ರಿಲ್ 28, (ಕರ್ನಾಟಕ ವಾರ್ತೆ) : ಪಶುಸಂಗೋಪನೆ ಮತ್ತು ಮೀನು ಉತ್ಪಾದನೆಯಲ್ಲಿ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಸೃಷ್ಟಿಸಲು ಪಶು ಮತ್ತು ಮೀನುಗಾರಿಕೆ ವಿಜ್ಞಾನದಲ್ಲಿ ಅಧ್ಯಯನ, ಸಂಶೋಧನೆಯ ತುರ್ತು ಅಗತ್ಯವಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಗುರುವಾರ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮತಾನಾಡಿದರು.
ಕೃಷಿ ಉತ್ಪಾದಕತೆ ಹೆಚ್ಚಳ, ರೈತರ ಆದಾಯದಲ್ಲಿ ಹೆಚ್ಚಳ, ಜ್ಞಾನ ಮಟ್ಟ ಮತ್ತು ನೈಸರ್ಗಿಕ ಸಂಪನ್ಮೂಲಗಳ ಬಳಕೆ, ಜೀವವೈವಿಧ್ಯ ಸಂರಕ್ಷಣೆ, ಹವಾಮಾನ ಬದಲಾವಣೆ, ಸ್ಥಳೀಯ ವ್ಯವಸ್ಥೆಗಳ ಮೇಲೆ ಗಮನ ಕೇಂದ್ರೀಕರಿಸುವುದು ಮುಂತಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಉದ್ಯಮ / ಉದ್ಯಮಶೀಲತೆಯನ್ನು ವಿಸ್ತರಿಸಲು ಒತ್ತು ನೀಡಬೇಕಾಗಿದೆ. ಈ ದಿಕ್ಕಿನಲ್ಲಿ, ವಿಶ್ವವಿದ್ಯಾನಿಲಯವು ರಾಜ್ಯ ಮತ್ತು ದೇಶದ ಜಾನುವಾರು ಮತ್ತು ಮೀನುಗಾರಿಕಾ ಸಮುದಾಯಕ್ಕೆ ಸೇವೆ ಸಲ್ಲಿಸಲು ಅತ್ಯುತ್ತಮ ಮಾನವ ಸಂಪನ್ಮೂಲ, ನವೀನ ತಂತ್ರಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿ, ಶಿಕ್ಷಣ ಮತ್ತು ಸಂಶೋಧನೆಯ ಮೇಲೆ ಕೇಂದ್ರೀಕರಿಸಿದೆ.
ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶದ ಸಂಸ್ಕøತಿ, ಸಭ್ಯತೆಗೆ ವಿಶ್ವದಲ್ಲಿ ಉನ್ನತ ಸ್ಥಾನವಿದೆ. ಇದನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೂವ ಮೂಲಕ ಆತ್ಮ ನಿರ್ಭರ್ ಭಾರತ ಮತ್ತು ಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವ ಪೀಳಿಗೆಗಳ ನಿಮ್ಮ ಮೇಲಿದೆ ಎಂದು ವಿದ್ಯಾರ್ಥಿಗಳನ್ನುದೇಶಿಸಿ ಹೇಳಿದರು.ಸಮಾರಂಭದಲ್ಲಿ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹ್ವಾಣ್, ಡಾ. ಭೂಪೇಂದ್ರನಾಥ್ ತ್ರಿಪಾಠಿ, ಕುಲಪತಿ ಪ್ರೊ.ಕೆ. ಸಿ.ವೀರಣ್ಣ, ಮುಂತಾದವರು ಉಪಸ್ಥಿತರಿದ್ದರು.




0 Comments