ಬಳ್ಳಾರಿ ಏ 29. ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಉಪಹಾರ ಕೂಟದಲ್ಲಿ ಭಾಗಿಯಾಗಿಯಾದ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರರವರು ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯ ಹಾಗೂ ರಾಜಕೀಯ ಬೆಳವಣಿಗೆಯ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ಎಲ್ ಸ್ವಾಮಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ರಾಮ್ ಪ್ರಸಾದ್, ಕಮಲಮ್ಮ, ಮಾಜಿ ಉಪಮೇಯರ್ ಆದ ಬೆಣಕಲ್ ಬಸರಾಜ ಗೌಡ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಸಿಂಧುವಾಳ ಗಾದಿಲಿಂಗನಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾನಯ್ಯ, ಡಿಸಿಸಿ ನಗರ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಮಹಾನಗರ ಪಾಲಿಕೆ ಸದಸ್ಯರಾದ ಕೆ.ಹೊನ್ನಪ್ಪ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀನಾಥ್, ಎಂ.ಜಿ ಕನಕ ಹಾಗೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

0 Comments