ನಗರದ ಬಳ್ಳಾರಿ ರಸ್ತೆ ಜಕ್ಕೂರು(ಏರೋ ಡ್ರಮ್) ಬಳಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರಿ ವೈಮಾನಿಕ ಶಾಲೆಯಿಂದ ಒಟ್ಟು 2,450.74 ಚದರ ಮೀಟರ್ ಜಾಗವನ್ನು ಪಾಲಿಕೆಗೆ ಹಸ್ತಾಂತರ ಮಾಡಿಕೊಂಡು ಈಗಾಗಲೇ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲು ಯೋಜಿಸಲಾಗಿದ್ದು, ಶೀಘ್ರ ಕಾರ್ಯಾದೇಶ ನೀಡಿ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಸದರಿ ಅಗಲೀಕರಣ ಮಾರ್ಗದಲ್ಲಿ ಗ್ಯಾಸ್ ಪೈಪ್ ಲೈನ್ ಇದ್ದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಲಾಗಿರುತ್ತದೆ. ಗ್ಯಾಸ್ ಪೈಪ್ ಲೈನ್ ಸ್ಥಳಾಂತರ ಮಾಡಿದ ಬಳಿಕ ರಸ್ತೆ ಪುನಶ್ಚೇತನ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್ ರವರು ಮುಖ್ಯ ಆಯುಕ್ತರಿಗೆ ಮಾಹಿತಿ ನೀಡಿದರು.ಈ ವೇಳೆ ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ಮುಖ್ಯ ಇಂಜಿನಿಯರ್ ಗಳಾದ ರಂಗನಾಥ್, ವಿಜಯ್ ಕುಮಾರ್ ಹರಿದಾಸ್, ಸುಗುಣಾ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments